ಮುಂಬೈ: ಹಣಕಾಸು ಹಾಗೂ ಬ್ಯಾಂಕಿಂಗ್ ಷೇರುಗಳ ಮಾರಾಟ ಹೆಚ್ಚಳದಿಂದಾಗಿ ಬುಧವಾರ ನಡೆದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 426 ಅಂಶ ಇಳಿಕೆ ಕಂಡು, 79,942 ಅಂಶಗಳಲ್ಲಿ ಮುಕ್ತಾಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 126 ಅಂಶ ಇಳಿಕೆ ಕಂಡು, 24,340 ಅಂಶಗಳಲ್ಲಿ ಸ್ಥಿರಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಇನ್ಫೊಸಿಸ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಎಸ್‌ಬಿಐ, ಎಚ್‌ಸಿಎಲ್ ಟೆಕ್ನಾಲಜೀಸ್, ಎಕ್ಸಿಸ್ ಬ್ಯಾಂಕ್, ಎನ್‌ಟಿಪಿಸಿ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 0.63ರಷ್ಟು ಏರಿಕೆಯಾಗಿದ್ದು, 71.57 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.