ಮುಂಬೈ: ಸತತ ಎರಡನೇ ದಿನವಾದ ಮಂಗಳವಾರವೂ ದೇಶದ ಷೇರುಪೇಟೆಯಲ್ಲಿ ಗೂಳಿ ಓಟ ಜೋರಾಯಿತು. ಬ್ಯಾಂಕಿಂಗ್ ಷೇರುಗಳ ಖರೀದಿ ಹೆಚ್ಚಳದಿಂದಾಗಿ ಸೂಚ್ಯಂಕಗಳು ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 363 ಅಂಶ ಏರಿಕೆ ಕಂಡು, 80,369 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 127 ಅಂಶ ಏರಿಕೆ ಕಂಡು, 24,466 ಅಂಶಗಳಲ್ಲಿ ಮುಕ್ತಾಯಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಎಸ್‌ಬಿಐ ಷೇರಿನ ಮೌಲ್ಯದಲ್ಲಿ ಶೇ 5ರಷ್ಟು ಏರಿಕೆಯಾಗಿದೆ. ಐಸಿಐಸಿಐ ಬ್ಯಾಂಕ್, ಬಜಾಜ್ ಫಿನ್‌ಸರ್ವ್, ಎನ್‌ಟಿಪಿಸಿ, ಅದಾನಿ ಪೋರ್ಟ್ಸ್, ಬಜಾಜ್ ಫೈನಾನ್ಸ್, ಎಲ್ ಆ್ಯಂಡ್ ಟಿ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಮಾರುತಿ, ಟಾಟಾ ಮೋಟರ್ಸ್, ಸನ್ ಫಾರ್ಮಾ, ಭಾರ್ತಿ ಏರ್‌ಟೆಲ್, ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ ಷೇರಿನ ಮೌಲ್ಯದಲ್ಲಿ ಕುಸಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.