ADVERTISEMENT

ಷೇರು ಪೇಟೆ | ಸೆನ್ಸೆಕ್ಸ್‌, ನಿಫ್ಟಿ ಇಳಿಕೆ

ಪಿಟಿಐ
Published 16 ಅಕ್ಟೋಬರ್ 2024, 13:48 IST
Last Updated 16 ಅಕ್ಟೋಬರ್ 2024, 13:48 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಐ.ಟಿ ಮತ್ತು ಆಟೊ ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಬುಧವಾರದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ. 

ವಿದೇಶಿ ಬಂಡವಾಳದ ಹೊರಹರಿವು ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ನಡೆದ ನಕಾರಾತ್ಮಕ ವಹಿವಾಟು ಕೂಡ ದೇಶದ ಷೇರುಪೇಟೆ ಮೇಲೆ ಪರಿಣಾಮ ಬೀರಿತು. 

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 318 ಅಂಶ ಇಳಿಕೆಯಾಗಿ, 81,501ಕ್ಕೆ ವಹಿವಾಟು ಅಂತ್ಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 86 ಅಂಶ ಕಡಿಮೆಯಾಗಿ 24,971ಕ್ಕೆ ಕೊನೆಗೊಂಡಿತು. 

ADVERTISEMENT

ಮಹೀಂದ್ರ ಆ್ಯಂಡ್‌ ಮಹೀಂದ್ರ, ಇನ್ಫೊಸಿಸ್‌, ಕೋಟಕ್‌ ಮಹೀಂದ್ರ ಬ್ಯಾಂಕ್, ಜೆಎಸ್‌ಡಬ್ಲ್ಯು ಸ್ಟೀಲ್‌, ಅದಾನಿ ಪೋರ್ಟ್ಸ್‌, ಟಾಟಾ ಮೋಟರ್ಸ್‌, ಐಟಿಸಿ ಮತ್ತು ಟೈಟನ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. 

ಎಚ್‌ಡಿಎಫ್‌ಸಿ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಏಷ್ಯನ್ ಪೇಂಟ್ಸ್‌ ಮತ್ತು ಎಸ್‌ಬಿಐ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.