ನವದೆಹಲಿ: ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು, ಇನ್ಫೊಸಿಸ್ ಕಂಪನಿಯಲ್ಲಿ ₹5,600 ಕೋಟಿ ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ.
ಮೂರ್ತಿ ಟ್ರಸ್ಟ್‌ನ ಅಧ್ಯಕ್ಷೆಯೂ ಆಗಿ ಸೇವೆ ಸಲ್ಲಿಸುತ್ತಿರುವ ಅವರು, ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.
ಸುಧಾ ಅವರು, 3.45 ಕೋಟಿ ಷೇರುಗಳನ್ನು (ಶೇ 0.83) ಹೊಂದಿದ್ದಾರೆ. ಬಿಎಸ್‌ಇಯಲ್ಲಿ ಪ್ರತಿ ಷೇರಿನ ಬೆಲೆ ₹1,616.95 ಆಗಿದೆ ಎಂದು ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ಗೆ ಕಂಪನಿಯು ತಿಳಿಸಿದೆ.
ಸುಧಾ ಅವರ ಪತಿ ನಾರಾಯಣಮೂರ್ತಿ ಅವರು, 1.66 ಕೋಟಿ ಈಕ್ವಿಟಿ ಷೇರುಗಳನ್ನು ಹೊಂದಿದ್ದು, ಇವುಗಳ ಮೌಲ್ಯ ₹2,691 ಕೋಟಿ ಆಗಿದೆ.
2006ರಲ್ಲಿ ಪದ್ಮಶ್ರೀ ಪುರಸ್ಕೃತರಾಗಿದ್ದ ಸುಧಾ ಅವರಿಗೆ ಕಳೆದ ಜನವರಿಯಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು. ಶುಕ್ರವಾರ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.