ADVERTISEMENT

ಶಹನಾಯ್‌ ವಾದಕ ಪಂಡಿತ್ ಬಸವರಾಜ ಭಜಂತ್ರಿಗೆ ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 14:11 IST
Last Updated 2 ಅಕ್ಟೋಬರ್ 2024, 14:11 IST
ಬಸವರಾಜ ಭಜಂತ್ರಿ
ಬಸವರಾಜ ಭಜಂತ್ರಿ   

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಸಂಗೀತ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2024-25ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆಯಾಗಿದ್ದಾರೆ.

ಪಂಡಿತ್ ಎಂ. ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿಯು ಬಸವರಾಜ ಭಜಂತ್ರಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು ₹5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಗುರುವಾರ ನಡೆಯುವ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪಂಡಿತ್ ಬಸವರಾಜ ಭಜಂತ್ರಿ ಅವರು ಹಾವೇರಿ ಜಿಲ್ಲೆಯವರಾಗಿದ್ದು, ಬಾಲ್ಯದಿಂದಲೂ ಶಹನಾಯಿ ನುಡಿಸುತ್ತಾ ಬಂದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.