ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ, ಶ್ರದ್ಧೆ–ಭಕ್ತಿಯೊಂದಿಗೆ ನಡೆಯಿತು. ಈ ಬಾರಿ ಬರ ಪರಿಸ್ಥಿತಿ ಎದುರಾಗಿದ್ದರೂ ಭಕ್ತರ ಉತ್ಸಾಹ ಕುಂದಿರಲಿಲ್ಲ. ಉತ್ಸವಕ್ಕೂ ಮೊದಲು ಹಿರೇಮಠದಲ್ಲಿ ವಿಶೇಷ ಪೂಜೆ ನಡೆಯಿತು. ಸಂಜೆ 4 ಗಂಟೆಗೆ ಉತ್ಸವಮೂರ್ತಿಯನ್ನು ಅರ್ಚಕರು ಹೊರತಂದು ಅಲಂಕೃತ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿದರು. ನಂತರ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.