ADVERTISEMENT

ಬಾದಾಮಿ | ಮಳೆ: 500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 14:18 IST
Last Updated 17 ಅಕ್ಟೋಬರ್ 2024, 14:18 IST
ಬಾದಾಮಿ ತಾಲ್ಲೂಕಿನ ಮಲಪ್ರಭಾ ನದಿ ಪ್ರವಾಹದಿಂದ ನದಿ ದಂಡೆಯಲ್ಲಿರುವ ಬೆಳೆಗಳು ಜಲಾವೃತವಾಗಿವೆ
ಬಾದಾಮಿ ತಾಲ್ಲೂಕಿನ ಮಲಪ್ರಭಾ ನದಿ ಪ್ರವಾಹದಿಂದ ನದಿ ದಂಡೆಯಲ್ಲಿರುವ ಬೆಳೆಗಳು ಜಲಾವೃತವಾಗಿವೆ   

ಬಾದಾಮಿ: ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲ್ಲೂಕಿನ ಮಲಪ್ರಭಾ ನದಿ ದಂಡೆಯ ಅಂದಾಜು 500ಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಬೆಳೆ ಹಾನಿಯ ಸರ್ವೇ ಕಾರ್ಯ ನಡೆದಿದೆ ಎಂದು ತಹಶೀಲ್ದಾರ್ ಮಧುರಾಜ ತಿಳಿಸಿದರು.

ಈಚೆಗೆ ಮಲಪ್ರಭಾ ನದಿಗೆ ಬೆಣ್ಣೆ ಹಳ್ಳದ ನೀರು ಮತ್ತು ನವಿಲುತೀರ್ಥ ಜಲಾಶಯದ ಹೆಚ್ಚುವರಿ ನೀರಿನಿಂದ ಬೆಳೆಗಳೆಲ್ಲಾ ಜಲಾವೃತವಾಗಿತ್ತು.

ಕಬ್ಬು, ಮಕ್ಕೆಜೋಳ, ಹತ್ತಿ ಬೆಳೆಗಳಿಗೆ ಹಾನಿಯಾಗಿವೆ. ತಾಲ್ಲೂಕಿನಲ್ಲಿ ಬುಧವಾರ ಸುರಿದ ಮಳೆಯಿಂದ ಅಂದಾಜು 10 ಮನೆಗಳು ಭಾಗಶಃ ಕುಸಿದ ಬಗ್ಗೆ ವರದಿಯಾಗಿದೆ.

ADVERTISEMENT

ಆಗಷ್ಟ್ ತಿಂಗಳಲ್ಲಿನ ನೆರೆ ಪ್ರವಾಹದಿಂದ 1550 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಹಾನಿಯಾದ ಬೆಳೆಗೆ ರೈತರಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ ಮಾಹಿತಿ ಕಳಿಸಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.