ಬಾಗಲಕೋಟೆ: ಕೊರೊನಾ ವೈರಸ್ ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ 22ರವರೆಗೆ ಒಂದು ವಾರ ಕಾಲ ಇಲ್ಲಿನ ಬಾದಾಮಿ, ಐಹೊಳೆ, ಪಟ್ಟದಕಲ್ಲಿನ ಪುರಾತತ್ವ ಸ್ಮಾರಕಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಭಾರತೀಯ ಪುರಾತತ್ವ ಇಲಾಖೆ ವ್ಯಾಪ್ತಿಯ ಈ ಸ್ಮಾರಕಗಳಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ದೇಶ–ವಿದೇಶದ ಪ್ರವಾಸಿಗರು ಬರುತ್ತಾರೆ. ಹೀಗಾಗಿ ಕೊರೊನಾ ವೈರಸ್ ಹರಡುವಿಕೆ ಸಾಧ್ಯತೆ ಹೆಚ್ಚಿರುವ ಕಾರಣ ಸ್ಮಾರಕಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಆದೇಶ ಮಾರ್ಚ್ 15ರ ಮುಂಜಾನೆ 6 ಗಂಟೆಯಿಂದಲೇ ಅನ್ವಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
’ನನಗೆ ತಿಳಿವಳಿಕೆ ಬಂದಂತೆ ಇದೇ ಮೊದಲ ಬಾರಿಗೆ ಚಾಲುಕ್ಯರ ಸ್ಮಾರಕಗಳಿಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಇದೊಂದು ವಿಶೇಷ ಸಂದರ್ಭ. ಅನಿವಾರ್ಯವೂ ಹೌದು ಎಂದು ನಿವೃತ್ತ ಉಪನ್ಯಾಸಕರೂ ಆದ ಬಾದಾಮಿಯ ಇತಿಹಾಸ ತಜ್ಞ ಡಾ.ಶಿಲಾಕಾಂತ ಪತ್ತಾರ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.