ಹುನಗುಂದ: ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ತಾಲ್ಲೂಕು ಘಟಕದ ವತಿಯಿಂದ ಬೆಳಿಗ್ಗೆ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ನಾಗಲಿಂಗ ನಗರದ ಜನರಿಗೆ ಸಂಚರಿಸಲು ಅಡಚಣೆಯಾಗುತ್ತಿದೆ. ಈ ಮೊದಲು ಏಕಪಥ ರಸ್ತೆ ಇತ್ತು. ಈಗ ದ್ವಿಪಥ ರಸ್ತೆಯಾಗಿರುವುದರಿಂದ ಹೆಚ್ಚಿನ ವಾಹನಗಳು ಸಂಚರಿಸುತ್ತಿವೆ. ಹೀಗಾಗಿ ಸಾರ್ವಜನಿಕರು, ಶಾಲಾ ಕಾಲೇಜು ಮಕ್ಕಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ ಎಂದು ದೂರಿದರು.
ಇದನ್ನೂ ಓದಿ:ತುಮಕೂರು | ಮರಳು ಲಾರಿ ತಡೆದು ಪ್ರತಿಭಟನೆ
ಈ ಮಾರ್ಗದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಖಂಡಿಸಿ ರಸ್ತೆ ತಡೆ ನಡೆಸಿ, ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.