ADVERTISEMENT

ಮುಧೋಳ: ಮಿರ್ಜಿ ಗ್ರಾಮದಲ್ಲಿ ಕಾಳಜಿ ಕೇಂದ್ರ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 15:47 IST
Last Updated 25 ಜುಲೈ 2024, 15:47 IST
ಮುಧೋಳ ತಾಲ್ಲೂಕಿನ ಮಿರ್ಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ಕಾಳಜಿ ಕೇಂದ್ರಲ್ಲಿರುವ ಜನರು
ಮುಧೋಳ ತಾಲ್ಲೂಕಿನ ಮಿರ್ಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ಕಾಳಜಿ ಕೇಂದ್ರಲ್ಲಿರುವ ಜನರು   

ಮುಧೋಳ: ಘಟಪ್ರಭಾ ನದಿಯ ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವು ಬರುತ್ತಿದೆ. ಹೆಚ್ಚುವರಿ ನೀರನ್ನು ಕ್ರೆಸ್ಟ್ ಗೇಟುಗಳ ಮೂಲಕ ಬಿಡಲಾಗಿದ್ದರಿಂದ ತಾಲ್ಲೂಕಿನ ನದಿ ಪಾತ್ರದ ಜಮೀನುಗಳಿಗೆ ನೀರು ಬಂದಿದೆ. ಗ್ರಾಮಗಳಿಗೂ ಬರುವ ಸಾಧ್ಯತೆ ಇದೆ.

ತಾಲ್ಲೂಕಿನ ಮಿರ್ಜಿ ಗ್ರಾಮಕ್ಕೆ ನದಿ ನೀರು ಸಮೀಪಿಸುತ್ತಿದೆ. ತಾಲ್ಲೂಕು ಆಡಳಿತ ಮುಂಜಾಗ್ರತೆಯಾಗಿ ಕಾಳಜಿ ಕೇಂದ್ರವನ್ನು ತೆರೆದಿದೆ. ಗುರುವಾರ ರಾತ್ರಿ ಆರು ಕುಟುಂಬದ 32 ಜನರನ್ನು ಹಾಗೂ 8 ಜಾನುವಾರುಗಳು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ನದಿ ಪಾತ್ರದ ಗ್ರಾಮದ ಜನರು ನದಿಗೆ ಇಳಿಯದೆ. ಸುರಕ್ಷಿತ ಸ್ಥಳಗಳಿಗೆ ಸ್ವಯಂ ಪ್ರೇರಣೆಯಿಂದ ಸ್ಥಾಳಂತರಗೊಳ್ಳಲು ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ವಿನಂತಿಸಿದ್ದಾರೆ.

ADVERTISEMENT
ಮುಧೋಳ ತಾಲ್ಲೂಕಿನ ಮಿರ್ಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ
ಮುಧೋಳ ತಾಲ್ಲೂಕಿನಲ್ಲಿ ತುಂಬಿ ಹರಿಯುತ್ತಿರುವ ಘಟಪ್ರಭಾ ನದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.