ಬಾಗಲಕೋಟೆ: ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ನಾಲ್ವರು ಸಚಿವರು ಕೂಡಲಸಂಗಮದಲ್ಲಿನ ಪವಿತ್ರ ಮಣ್ಣು ತೆಗೆದುಕೊಂಡು ಹೋದರು.
ಕೂಡಲಸಂಗಮದ ಸಂಗಮನಾಥ ಹಾಗೂ ಬಸವಣ್ಣನ ಐಕ್ಯ ಸ್ಥಳಕ್ಕೆ ತೆರಳಿದ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ ನಮನ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ಜಾತ್ಯತೀತ, ಕಾಯಕ, ಸಾಮಾಜಿಕ ನ್ಯಾಯ, ಸಮಾಜ ಸಮಗ್ರ ಸುಧಾರಣೆಯ ತತ್ವಗಳು ಸದಾಕಾಲ ಅನ್ವಯವಾಗುತ್ತವೆ ಎಂದರು.
ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡರ ಮೂರ್ತಿ ಅನಾವರಣ ಸಂದರ್ಭ ದಲ್ಲಿ ನಾಡನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಇಲ್ಲಿನ ಪವಿತ್ರ ಮಣ್ಣನ್ನು ತೆಗೆದುಕೊಂಡು ಹೋಗಲಾಗುತ್ತದೆ ಎಂದರು.
ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಕೆಂಪೇಗೌಡರ ಹೆಸರಿಡಲಾಗಿದೆ. ಅಲ್ಲಿ ಪ್ರತಿಮೆ ಸ್ಥಾಪಿಸಿವ ಮೂಲಕ ಅವರ ದರ್ಶನ ಮಾಡಿಸಲಾಗುತ್ತಿದೆಎಂದುಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.