ADVERTISEMENT

‘ಸಂಶೋಧನೆಗೆ ಎಐ ತಂತ್ರಜ್ಞಾನ ಬಳಸಿ’

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 16:17 IST
Last Updated 23 ನವೆಂಬರ್ 2024, 16:17 IST
ಬಾಗಲಕೋಟೆಯ ಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸೀನಿಯರ್ ಟೆಕ್ನಾಲಜಿ ಮ್ಯಾನೇಜರ್ ಕಾರ್ತಿಕ ಮುಳಗುಂದ ಮಾತನಾಡಿದರು
ಬಾಗಲಕೋಟೆಯ ಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸೀನಿಯರ್ ಟೆಕ್ನಾಲಜಿ ಮ್ಯಾನೇಜರ್ ಕಾರ್ತಿಕ ಮುಳಗುಂದ ಮಾತನಾಡಿದರು   

ಬಾಗಲಕೋಟೆ: ‘ಜಗತ್ತಿನಾದ್ಯಂತ ಸಂಶೋಧನೆಗೆ ಹೆಚ್ಚಿನ ಮಹತ್ವವಿದೆ. ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಬಳಸಿಕೊಳ್ಳಬೇಕು’ ಎಂದು ಬೆಂಗಳೂರಿನ ಸೀನಿಯರ್ ಟೆಕ್ನಾಲಜಿ ಮ್ಯಾನೇಜರ್ ಕಾರ್ತಿಕ ಮುಳಗುಂದ ಹೇಳಿದರು.

ಬಸವೇಶ್ವರ ವಿಜ್ಞಾನ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮನುಷ್ಯ ದೈಹಿಕ ಅಥವಾ ಬೌದ್ಧಿಕವಾಗಿ ನಿರ್ವಹಿಸಬಹುದಾದ ಕೆಲಸವನ್ನು ತಂತ್ರಜ್ಞಾನ ಆಧಾರಿತ ಸಾಧನಗಳ ಮೂಲಕ ಮಾಡುವಂತಹ ಅಥವಾ ಮಾಡಿಸುವಂತಹ ಆವಿಷ್ಕಾರವೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಿಂತ ಬಿಎಸ್‌ಸಿ  ವಿದ್ಯಾರ್ಥಿಗಳಿಗೆ ಎಐ ತಂತ್ರಜ್ಞಾನ ಹೆಚ್ಚು ಉಪಯೋಗವಾಗುತ್ತದೆ’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಎಂ. ಗಾಂವಕರ ಮಾತನಾಡಿ, ‘ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಎಐ ತಂತ್ರಜ್ಞಾನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಐಕ್ಯೂಎಸಿ ಸಂಯೋಜಕ ಡಿ.ಎಸ್. ಲಮಾಣಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ವಿ.ಎನ್. ವನಕುದರಿ, ಸಾಂಸ್ಕೃತಿಕ ಚಟುವಟಿಕೆ ಸಂಯೋಜಕ ಎಸ್.ಆರ್.ದೇಶಪಾಂಡೆ, ದೈಹಿಕ ಶಿಕ್ಷಣ ನಿರ್ದೇಶಕ ಸಿದ್ದರಾಮ ಮಂಕಣಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಜಯಕುಮಾರ ನಾಯಕ್, ಅಶ್ವಿನಿ ಚಿಲಮೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.