ADVERTISEMENT

ಬಸವಕಲ್ಯಾಣ: 18ರಿಂದ ಕಲ್ಯಾಣ ಪರ್ವ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 22:18 IST
Last Updated 14 ಅಕ್ಟೋಬರ್ 2024, 22:18 IST
ಮಾತೆ ಗಂಗಾದೇವಿ
ಮಾತೆ ಗಂಗಾದೇವಿ   

ಕೂಡಲಸಂಗಮ : ‘ಬಸವ ಧರ್ಮ ಪೀಠದಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅಕ್ಟೋಬರ್ 18 ರಿಂದ 20ರವರೆಗೆ 23ನೇ ಕಲ್ಯಾಣ ಪರ್ವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

‘18ರಂದು ಧರ್ಮ ಚಿಂತನ ಗೋಷ್ಠಿ ಮತ್ತು ಮಹಿಳಾ ಗೋಷ್ಠಿ, 19ರಂದು 23ನೇ ಕಲ್ಯಾಣ ಪರ್ವ ಉದ್ಘಾಟನೆ, ಪೀಠಾರೋಹಣ ಸಮಾರಂಭ ನಡೆಯಲಿದೆ. 20ರಂದು ಬಸವಣ್ಣನ ಭಾವಚಿತ್ರ ಮತ್ತು ವಚನ ಸಾಹಿತ್ಯದ ಮೆರವಣಿಗೆ ನಡೆಯಲಿದೆ. ಸಮಾರಂಭದಲ್ಲಿ ಸಚಿವರು, ಶಾಸಕರು, ಚಿಂತಕರು, ಸಂಶೋಧಕರು, ಸ್ವಾಮೀಜಿ ಪಾಲ್ಗೊಳ್ಳುವರು’ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ತಿಳಿಸಿದ್ದಾರೆ.

‘ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಂದ 1 ಲಕ್ಷಕ್ಕೂ ಹೆಚ್ಚು ಜನ‌ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮದ ಎಲ್ಲ ಸಿದ್ಧತೆ ಪೂರ್ಣಗೊಂಡಿವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.