ಹುನಗುಂದ: ಹುನಗುಂದ ಮತ್ತು ಇಳಕಲ್ ತಾಲ್ಲೂಕುಗಳಲ್ಲಿ ಫೆ. 11 ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಜಾಗೃತಿ ಜಾಥಾ ಕಾಯಾಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಸ್ವ-ಸಹಾಯ ಸಂಘಗಳ ಸದಸ್ಯರು, ಶಾಲೆ ಕಾಲೇಜುಗಳ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಮತ್ತು ಪರಿಶಿಷ್ಟ ಸಮಾಜದ ಮುಖಂಡರು ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳಬೇಕು.
ಆಯಾ ಗ್ರಾಮ ಪಂಚಾಯತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-2) ಎಂ.ಎಚ್. ಕಟ್ಟಿಮನಿ ತಿಳಿಸಿದ್ದಾರೆ. ಮಾಹಿತಿಗಾಗಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 08351- 260583
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.