ADVERTISEMENT

‘ಭ್ರಷ್ಟಾಚಾರ ನಿರ್ಮೂಲನೆಗೆ ಸಂಕಲ್ಪ ಮಾಡಿ’

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 14:35 IST
Last Updated 5 ನವೆಂಬರ್ 2024, 14:35 IST
ಅಮೀನಗಡ : ಸಮೀಪದ ಸೂಳೇಭಾವಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಸೋಮವಾರ ನಡೆದ ವಿರುದ್ಧ ಜಾಗೃತ ಸಪ್ತಾಹ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಬಸವರಾಜ ಮುಕರ್ತಿಹಾಳ ಮಾತನಾಡಿದರು.i
ಅಮೀನಗಡ : ಸಮೀಪದ ಸೂಳೇಭಾವಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಸೋಮವಾರ ನಡೆದ ವಿರುದ್ಧ ಜಾಗೃತ ಸಪ್ತಾಹ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಬಸವರಾಜ ಮುಕರ್ತಿಹಾಳ ಮಾತನಾಡಿದರು.i   

ಅಮೀನಗಡ: ಭ್ರಷ್ಟಾಚಾರ ಮುಕ್ತ ದೇಶಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡಬೇಕಾಗಿದೆ. ಇಂದಿನ ವಾಸ್ತವಿಕ ಸಮಾಜದ ಬಹುದೊಡ್ಡ ಸಮಸ್ಯೆಯಾದ ಭ್ರಷ್ಟಾಚಾರವನ್ನು ಬುಡ ಸಮೇತ ಕೀಳಬೇಕಾಗಿದೆ ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಬಸವರಾಜ ಮುಕರ್ತಿಹಾಳ ಅಭಿಪ್ರಾಯಪಟ್ಟರು.

ಸಮೀಪದ ಸೂಳೇಭಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸೋಮವಾರ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತ ಅರಿವು ಸಾಪ್ತಾಹಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭವಿಷ್ಯದ ಸಮಾಜದಲ್ಲಿ ಕೈಗನ್ನಡಿಯಾಗುವ ಮಕ್ಕಳು ಭ್ರಷ್ಟಾಚಾರದ ಬಗ್ಗೆ ಜಾಗೃತಿ ಹೊಂದಬೇಕು. ರಾಷ್ಟ್ರದ ಅಭ್ಯುದಯಕ್ಕಾಗಿ ಭ್ರಷ್ಟಾಚಾರವನ್ನು ಕಿತ್ತೊಗೆಯಬೇಕು ಎಂದರು.

ಇದೇ ಸಂದರ್ಭದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ADVERTISEMENT

ಪ್ರಾಚಾರ್ಯ ಎಂ.ಎಚ್.ಹಡಪದ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಚ್ ಕಟ್ಟಿಮನಿ, ಲೋಕಾಯುಕ್ತದ ಹನಮಂತ ಹಲಗತ್ತಿ, ಎನ್.ಎ.ಪೂಜಾರಿ, ಬಿ.ವಿ.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.