ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರಿನಲ್ಲಿ ನಡೆದ ಘಟನೆಯಲ್ಲಿ ಬಂಧಿಸಿದವರ ಮೇಲೆ ಠಾಣೆಯಲ್ಲಿ ಹಲ್ಲೆ ಮಾಡಿರುವುದು ವಿಚಾರಣೆ ವೇಳೆ ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಬಾದಾಮಿಯ ಸಿಪಿಐ ಕರಿಯಪ್ಪ ಬನ್ನೆ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠ ಜಯಪ್ರಕಾಶ ಆದೇಶಿಸಿದ್ದಾರೆ.
ಇಲಾಖೆ ವಿಚಾರಣೆ ಬಾಕಿ ಇಟ್ಟು ಅಮಾನತು ಮಾಡಲಾಗಿದೆ. ಕೇಂದ್ರಸ್ಥಾನ ಬಿಡಬಾರದು. ಕೇಂದ್ರಸ್ಥಾನ ಬಿಡುವುದಾದರೆ, ಅನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.
ಘಟನೆ ಹಿನ್ನಲೆ: ಸೆ.6 ರಂದು ಕೆರೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಸಿಪಿಐ ಕರಿಯಪ್ಪ ಬನ್ನೆ ಅವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಶರಣು ಸಜ್ಜನ ಹಾಗೂ ಕೆಲವರನ್ನು ಬಂಧಿಸಲಾಗಿತ್ತು.
ಅವರನ್ನು ಬಾದಾಮಿ ಠಾಣೆಗೆ ಕರೆ ತಂದು, ಅವರ ಮೇಲೆ ಲಾಠಿಯಿಂದ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಗಳು ಹಾಗೂ ಹಿಂದೂ ಜಾಗರಣ ವೇದಿಕೆ ಮುಖಂಡರು ದೂರಿದ್ದರು.
ಬನ್ನೆ ಅವರನ್ನು ಅಮಾನತುಗೊಳಿಸಬೇಕು ಎಂದು ಕೆರೂರು ಚಲೋ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.