ADVERTISEMENT

ಬಾಗಲಕೋಟೆ | ಪಕ್ಷಕ್ಕೆ ದುಡಿದವರಿಗೆ ಅಧಿಕಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:14 IST
Last Updated 7 ಜುಲೈ 2024, 16:14 IST
ಬಾಗಲಕೋಟೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಮಾತನಾಡಿದರು
ಬಾಗಲಕೋಟೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಮಾತನಾಡಿದರು   

ಬಾಗಲಕೋಟೆ: ‘ಸ್ಥಳೀಯ ಸಂಸ್ಥೆಗಳು, ರಾಜ್ಯಮಟ್ಟದ ನಿಗಮ, ಮಂಡಳಿಗಳಲ್ಲಿ ಜಿಲ್ಲೆಯ ಮುಖಂಡರಿಗೆ, ಕಾರ್ಯಕರ್ತರಿಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್‌ ಮುಖಂಡರು ಮನವಿ ಮಾಡಿದರು.

ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ‘ಭಾಗವಹಿಸಿದ್ದ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಮಿತಿಗಳ ಸದಸ್ಯರು, ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಸಿಗುವಂತಾಗಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ವರ್ಷವೇ ಆಗಿದೆ. ಜಿಲ್ಲೆಯಲ್ಲಿ ಬಹುತೇಕ ಅಧಿಕಾರ ಶಾಸಕರಿಗೆ ಲಭಿಸಿದೆ. ಕಾರ್ಯಕರ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅಧಿಕಾರ ದೊರೆತಿಲ್ಲ. ಕೂಡಲೇ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ನಾಮನಿರ್ದೇಶನ ಮಾಡಬೇಕು’ ಎಂದು ಕೋರಿದರು.

ADVERTISEMENT

‘ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ನಾಮ ನಿರ್ದೇಶನ ಮಾಡಲು ಅವಕಾಶವಿದೆ. ಕೂಡಲೇ ನಾಮನಿರ್ದೇಶನ ಮಾಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಜಿ. ನಂಜನಯ್ಯಮಠ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪೂರ್ಣಗೊಳಿಸಬೇಕು. ಯಾವುದೇ ಫಲಾನುಭವಿ ಯೋಜನೆಯಿಂದ ಹೊರಗುಳಿಯಬಾರದು’ ಎಂದರು.

ಶಾಸಕ ಭೀಮಸೇನ ಚಿಮ್ಮನಕಟ್ಟಿ, ಸಂಯುಕ್ತಾ ಪಾಟೀಲ, ಸಿದ್ದು ಕೊಣ್ಣೂರ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಗಿರೀಶ ಅಂಕಲಗಿ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಎಸ್.ಎಚ್. ತೆಗ್ಗೆನವರ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.