ADVERTISEMENT

ಏಳನೇ ವೇತನ ಆಯೋಗ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 15:50 IST
Last Updated 19 ಜೂನ್ 2024, 15:50 IST
 ಏಳನೇ ವೇತನ ಆಯೋಗ ಜಾರಿ ಮಾಡುವಂತೆ  ಆಗ್ರಹಿಸಿ ನೌಕರರ ಒಕ್ಕೂಟದ ವತಿಯಿಂದ ಜಮಖಂಡಿಯಲ್ಲಿ ತಹಶೀಲ್ದಾರ್‌ ಸದಾಶಿವ ಮಕ್ಕೋಜಿ ಅವರಿಗೆ ಮನವಿ ಸಲ್ಲಿಸಲಾಯಿತು
 ಏಳನೇ ವೇತನ ಆಯೋಗ ಜಾರಿ ಮಾಡುವಂತೆ  ಆಗ್ರಹಿಸಿ ನೌಕರರ ಒಕ್ಕೂಟದ ವತಿಯಿಂದ ಜಮಖಂಡಿಯಲ್ಲಿ ತಹಶೀಲ್ದಾರ್‌ ಸದಾಶಿವ ಮಕ್ಕೋಜಿ ಅವರಿಗೆ ಮನವಿ ಸಲ್ಲಿಸಲಾಯಿತು   

ಜಮಖಂಡಿ: ‘ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರೂ ಸರ್ಕಾರ ಜಾರಿ ಮಾಡದೇ ನೌಕರರಿಗೆ ಅನ್ಯಾಯವಾಗುತ್ತಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಹಲಗಿಮನಿ ಹೇಳಿದರು.

ಇಲ್ಲಿನ ಆಡಳಿತ ಸೌಧದ ಮುಂದೆ ಬುಧವಾರ ಏಳನೇ ವೇತನ ಆಯೋಗ ಜಾರಿಗೆಗೆ ಆಗ್ರಹಿಸಿ ನೌಕರರ ಒಕ್ಕೂಟದ ವತಿಯಿಂದ ತಹಶೀಲ್ದಾರ್‌ ಸದಾಶಿವ ಮುಕ್ಕೋಜಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.

‘ಹಳೆಯ ನಿಶ್ಚಿತ ಪಿಂಚಣಿ ಮರು ಸ್ಥಾಪನೆ, 2.60 ಲಕ್ಷ ಖಾಲಿ ಹುದ್ದೆಗಳ ಭರ್ತಿ ಹಾಗೂ ಹೊರಗುತ್ತಿಗೆ ನೌಕರರಿಗೆ ಕೆಲಸದ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಲ್ಲೂಕು ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶೋಭಾ ಸಾಳುಂಕೆ, ವಿಕಲಚೇತನ ನೌಕರರ ಸಂಘದ ಅಧ್ಯಕ್ಷ ಎಸ್.ಎಸ್.ಮೂಡಗಿ, ಎನ್.ಪಿ.ಎಸ್.ನೌಕರರ ಸಂಘದ ಅಧ್ಯಕ್ಷ ಪ್ರಶಾಂತ ಜಂಬಗಿ, ಲಕ್ಷ್ಮಣ ಮಿಸಿ, ಚಂದ್ರು ಸಿದಗೊಂಡ, ರಘು ಹಿರೇಮಠ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.