ADVERTISEMENT

ಮುಧೋಳ: ಘಟಪ್ರಭಾ ನದಿಗೆ ನೀರು ಹರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 15:33 IST
Last Updated 15 ಡಿಸೆಂಬರ್ 2023, 15:33 IST
ಮುಧೋಳದಲ್ಲಿ ಶುಕ್ರವಾರ ಘಟಪ್ರಭಾ ನದಿಗೆ ನೀರು ಹರಿಸಲು ಆಗ್ರಹಿಸಿ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಮನವಿ ಸಲ್ಲಿಸುತ್ತಿರುವ ರೈತ ಮುಖಂಡರು
ಮುಧೋಳದಲ್ಲಿ ಶುಕ್ರವಾರ ಘಟಪ್ರಭಾ ನದಿಗೆ ನೀರು ಹರಿಸಲು ಆಗ್ರಹಿಸಿ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಮನವಿ ಸಲ್ಲಿಸುತ್ತಿರುವ ರೈತ ಮುಖಂಡರು   

ಮುಧೋಳ: ಕಳೆದ 25 ದಿನಗಳಿಂದ ಘಟಪ್ರಭಾ ನದಿ ಬರಿದಾಗಿರುವುದರಿಂದ ಘಟಪ್ರಭಾ ನದಿ ಪಾತ್ರದ ಗ್ರಾಮಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಶೀಘ್ರ ನದಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರ ಸಂಘಟನೆ ಸದಸ್ಯರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ತಾಲ್ಲೂಕಿನ ರೈತರ ಜಮೀನುಗಳ ಪಂಪ್‌ಸೆಟ್‌ ಬಂದ್‌ ಆಗಿವೆ. ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಹೀಗಾದರೆ ಹೇಗೆ ಎಂಬ ಆತಂಕ ಜನರನ್ನು ಕಾಡುತ್ತಿದೆ. 

‘ರೈತರ ನೀರಾವರಿ ಜಮೀನುಗಳಿಗೆ ನೀರಿಲ್ಲ. ಜನ ಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆಯಾಗಿದೆ. ದನ ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ತಾಳಿದೆ. ಈ ಸಂದರ್ಣದಲ್ಲಿ ತಾಲ್ಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ತಾಲ್ಲೂಕ ಆಡಳಿತವಾಗಲಿ, ಜಿಲ್ಲಾಡಳಿತ ಗಮನ ಹರಿಸುತ್ತಿಲ್ಲ. ಡಿ.20ರೊಳಗೆ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ನಾಗೇಶ ಸೊರಗಾಂವಿ ಹೇಳಿದರು.

ADVERTISEMENT

ಮುಖಂಡ ದುಂಡಪ್ಪ ಯರಗಟ್ಟಿ ಮಾತನಾಡಿ, ಮಳೆ ಇಲ್ಲದೇ ಕೊಳವೆಬಾವಿಗಳಲ್ಲಿ ನೀರು ಹೋಗುತ್ತಿದೆ. ಕುಡಿಯುವ ನೀರಿಗೂ ತೊಂದರೆಯಾಗಿದೆ. ನದಿಗೆ ನೀರು ಹರಿಸಿದರೆ ಅಂತರ್ಜಲದ ಮಟ್ಟ ಅಧಿಕವಾಗಿ ಕುಸಿದು ಬೋರವೆಲ್‌ ಇರುವ ರೈತರು ಹಾಗೂ ತೋಟದಲ್ಲಿ ವಸತಿ ಇರುವ ಕುಟುಂಬಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕೂಡಲೇ ಹಿಡಕಲ್ ಜಲಾಶಯದಿಂದ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ವಿನೋದ ಹತ್ತಳ್ಳಿ ಹಾಗೂ ನೀರಾವರಿ ಇಲಾಖೆ ಅಧಿಕಾರಿ ಮಾರಡ್ಡಿ ಮನವಿ ಸ್ವೀಕರಿಸಿ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಮಹೇಶಗೌಡ ಪಾಟೀಲ, ಸುರೇಶ ಅಕ್ಕಿಮರಡಿ, ಮುದ್ದೇಶ ಗಾಯಕವಾಡ ಮುಂತಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.