ADVERTISEMENT

'ನೀಟ್' ಬೇಕೇ? ಬೇಡವೇ ಚರ್ಚೆಯಾಗಲಿ: ಸಚಿವ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:50 IST
Last Updated 28 ಜೂನ್ 2024, 15:50 IST

ಬಾಗಲಕೋಟೆ: ‘ನೀಟ್’ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರ ನೋಡಿದರೆ‌ ರಾಜ್ಯಕ್ಕೆ ನೀಟ್ ಪರೀಕ್ಷೆ ಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವ್ಯಾಪಕ ಚರ್ಚೆಯಾಗಬೇಕಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ‌ಭಾರತದ‌ ರಾಜ್ಯಗಳಲ್ಲಿ ಅವ್ಯವಹಾರ ನಡೆದಿದೆ. ಪರೀಕ್ಷೆಗಳು ಹೀಗಾದರೆ ಮಕ್ಕಳ ಭವಿಷ್ಯ‌ ಏನು? ನೀಟ್‌ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಪರೀಕ್ಷೆ ನಡೆಸುವ ಸಂಸ್ಥೆಯ ವಿರುದ್ಧ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT