ADVERTISEMENT

ವಚನ ಸಾಹಿತ್ಯದ ಬೆಳಕು ಹರಡಿದ ಫ.ಗು.ಹಳಕಟ್ಟಿ 

ಲೇಖಕಿ ನಾಗರತ್ನಾ ಅಶೋಕ ಭಾವಿಕಟ್ಟಿ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:00 IST
Last Updated 3 ಜುಲೈ 2024, 15:00 IST
ಇಳಕಲ್‌ನ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಮಂಗಳವಾರ ನಡೆದ ಡಾ.ಫ.ಗು.ಹಳಕಟ್ಟಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಲೇಖಕಿ ನಾಗರತ್ನಾ ಅಶೋಕ ಭಾವಿಕಟ್ಟಿ ಅವರಿಗೆ ಫ.ಗು.ಹಳಕಟ್ಟಿ ಸ್ಮರಣ ಪ್ರಶಸ್ತಿಯನ್ನು ಗುರುಮಹಾಂತ ಸ್ವಾಮೀಜಿ ಪ್ರದಾನ ಮಾಡಿದರು
ಇಳಕಲ್‌ನ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಮಂಗಳವಾರ ನಡೆದ ಡಾ.ಫ.ಗು.ಹಳಕಟ್ಟಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಲೇಖಕಿ ನಾಗರತ್ನಾ ಅಶೋಕ ಭಾವಿಕಟ್ಟಿ ಅವರಿಗೆ ಫ.ಗು.ಹಳಕಟ್ಟಿ ಸ್ಮರಣ ಪ್ರಶಸ್ತಿಯನ್ನು ಗುರುಮಹಾಂತ ಸ್ವಾಮೀಜಿ ಪ್ರದಾನ ಮಾಡಿದರು   

ಇಳಕಲ್‌: ‘ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಶೋಧಿಸಿ, ಸಂಪಾದನೆ ಮಾಡಿ ಪ್ರಕಟಿಸಿದ ಮೇಲೆಯೇ ಬಸವಾದಿ ಶರಣರು 12 ಶತಮಾನದಲ್ಲಿ ಮಾಡಿದ ಸಾಮಾಜಿಕ ಕ್ರಾಂತಿಯ ಮಹತ್ವ ಹೆಚ್ಚು ಜನರಿಗೆ ತಿಳಿಯಿತು’ ಎಂದು ಲೇಖಕಿ ನಾಗರತ್ನಾ ಅಶೋಕ ಭಾವಿಕಟ್ಟಿ ಅಭಿಪ್ರಾಯಪಟ್ಟರು.

ಇಲ್ಲಿಯ ವಿಜಯ ಮಹಾಂತೇಶ್ವರ ಸಂಸ್ಥಾನಮಠದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ನಡೆದ ವಚನ ಸಂರಕ್ಷಣಾ ದಿನಾಚರಣೆ ಸಮಾರಂಭದಲ್ಲಿ ಫ.ಗು.ಹಳಕಟ್ಟಿ ಸ್ಮರಣೆಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

‘ವಚನ ಸಾಹಿತ್ಯದ ಅಧ್ಯಯನದಿಂದ ಅರಿವು ಜಾಗೃತಗೊಂಡು, ಬೆಳಕು ಮೂಡುತ್ತದೆ. ವ್ಯಕ್ತಿ ಮತ್ತು ಸಮಾಜದ ಸ್ವಾಸ್ಥ್ಯಕ್ಕಾಗಿ ಪ್ರತಿಯೊಬ್ಬರು ವಚನ ಸಾಹಿತ್ಯ ಅಧ್ಯಯನ ಮಾಡಬೇಕು’ ಎಂದು ಹೇಳಿದರು.

ADVERTISEMENT

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಶಿಕ್ಷಕ ಮಲ್ಲಯ್ಯ ಗಣಾಚಾರಿ ಮಾತನಾಡಿ, ‘ಬಸವಾದಿ ಶರಣರ ರಚಿಸಿದ ವಚನಗಳು ಜಗತ್ತಿನಲ್ಲಿಯೇ ವಿಶಿಷ್ಟ ಹಾಗೂ ಅನನ್ಯ ಸಾಹಿತ್ಯವಾಗಿದೆ. ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯದ ಸಂಪಾದನೆ, ಪ್ರಕಟಣೆ ಕಾರ್ಯದಲ್ಲಿ ವಿಶ್ವವಿದ್ಯಾಲಯ ಮಾಡುವ ಕೆಲಸಕ್ಕಿಂತ ಮಿಗಿಲಾದುದನ್ನು ಏಕಾಂಗಿಯಾಗಿ ಮಾಡಿದರು. ಈ ಕಾರ್ಯಕ್ಕಾಗಿ ಅವರು ತಮ್ಮ ಆಸ್ತಿಯನ್ನು ಸಹ ಮಾರಾಟ ಮಾಡಿದರು. ಅವರು ಸದಾ ಕಾಲಕ್ಕೂ ಸ್ಮರಣೀಯರು’ ಎಂದು ಸ್ಮರಿಸಿದರು.

ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೆಹಲಿಯ ಡಾ.ಮಹಾಂತ ದೇವರು ಮಾತನಾಡಿದರು. ಬಸವಕೇಂದ್ರದ ಶಿವಾನಂದ ರೂಳಿ, ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಗಜೇಂದ್ರಗಡ, ತಾಲ್ಲೂಕು ಘಟಕದ ಅಧ್ಯಕ್ಷೆ ಅನುಪಮಾ ಗೊಂಗಡಶೆಟ್ಟಿ, ಬಸವ ಕೇಂದ್ರ, ಅಕ್ಕನ ಬಳಗ, ವಿಜಯ ಮಹಾಂತೇಶ ತರುಣ ಸಂಘದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.