ADVERTISEMENT

ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು: ತಗ್ಗು ಪ್ರದೇಶಗಳು ಜಲಾವೃತ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 12:45 IST
Last Updated 25 ಜುಲೈ 2024, 12:45 IST
ರಬಕವಿ ಬನಹಟ್ಟಿ ಸಮೀಪದಲ್ಲಿರುವ ಹರಿಯುತ್ತಿರುವ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ತೆಗ್ಗು ಪ್ರದೇಶದಲ್ಲಿ ನೀರು ಹರಿದು ಬರುತ್ತಿರುವುದು
ರಬಕವಿ ಬನಹಟ್ಟಿ ಸಮೀಪದಲ್ಲಿರುವ ಹರಿಯುತ್ತಿರುವ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ತೆಗ್ಗು ಪ್ರದೇಶದಲ್ಲಿ ನೀರು ಹರಿದು ಬರುತ್ತಿರುವುದು   

ರಬಕವಿ ಬನಹಟ್ಟಿ: ಸಮೀಪದ ಹಿಪ್ಪರಗಿ ಬ್ಯಾರೇಜ್‌ಗೆ ಗುರುವಾರ ಬೆಳಿಗ್ಗೆ 1,68,565 ಕ್ಯುಸೆಕ್‌ ಒಳ ಹರಿವು ಇದ್ದು 1,67,815 ಕ್ಯುಸೆಕ್‌ ಹೊರ ಹರಿವು ದಾಖಲಾಗಿದೆ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮತ್ತು ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಬಿಡುತ್ತಿರುವುದರಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಹಿಪ್ಪರಗಿ ಜಲಾಶಯದಲ್ಲಿ ನೀರಿನ ಮಟ್ಟ 523.90 ಮೀಟರ್‌ ಇದ್ದು ನಿರಂತರವಾಗಿ ನೀರನ್ನು ಬಿಡಲಾಗುತ್ತಿದೆ.

ADVERTISEMENT

ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾದಲ್ಲಿ 16.3 ಸೆಂ.ಮೀ, ನವುಜಾದಲ್ಲಿ 23.7 ಸೆಂ.ಮೀ ಮತ್ತು ಮಹಾಬಳೇಶ್ವರದಲ್ಲಿ 30.7 ಸೆಂ. ಮೀ ಮಳೆ ದಾಖಲಾಗಿದೆ.

ಮುಂದಿನ ದಿನಗಳಲ್ಲಿ ಕೃಷ್ಣಾ ನದಿಯಲ್ಲಿ ಇನ್ನೂ ನೀರಿನ ಪ್ರಮಾಣ ಹೆಚ್ಚಾಗಲಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ‍್ವೇತಾ ಬಿಡಕರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.