ADVERTISEMENT

ಜಾನಪದ ಉಳಿದರೆ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ: ಗಾಯಕ ಶಿವಪುತ್ರಪ್ಪ ತಾರಿವಾಳ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 14:13 IST
Last Updated 7 ಮಾರ್ಚ್ 2024, 14:13 IST
ಹುನಗುಂದ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕನ್ನಡ ಜಾನಪದ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಗಾಯಕ ಶಿವಪುತ್ರಪ್ಪ ತಾರಿವಾಳ ಮಾತನಾಡಿದರು
ಹುನಗುಂದ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕನ್ನಡ ಜಾನಪದ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಗಾಯಕ ಶಿವಪುತ್ರಪ್ಪ ತಾರಿವಾಳ ಮಾತನಾಡಿದರು   

ಹುನಗುಂದ: ‘ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ’ ಎಂದು ಗಾಯಕ ಶಿವಪುತ್ರಪ್ಪ ತಾರಿವಾಳ ಹೇಳಿದರು.

ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ನಡೆದ ಕನ್ನಡ ಜಾನಪದ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡನ್ನು ಜಾನಪದ ಸಾಹಿತ್ಯದಲ್ಲಿ ಕಾಣಬಹುದು. ಯುವ ಜನಾಂಗಕ್ಕೆ ಜಾನಪದ ಸಾಹಿತ್ಯದ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ಜಾನಪದ ಉಳಿದರೆ ದೇಶದ ಸಂಸ್ಕೃತಿ ಉಳಿಯಲು ಸಾಧ್ಯ’ ಎಂದರು.

ADVERTISEMENT

ಕನ್ನಡ ಜಾನಪದ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಡಿ. ಚಿತ್ತರಗಿ ಮಾತನಾಡಿ, ‘ಜಾನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಅದು ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ. ಜಾನಪದ ಹಳ್ಳಿಯ ಸಾಮಾನ್ಯ ಜನರ ನಡುವೆ ಹುಟ್ಟಿಕೊಂಡ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ. ಜಾನಪದ ಸಾಹಿತ್ಯ ನಮ್ಮ ಹಿಂದಿನ ಗತ ವೈಭವನ್ನು ಸಾರುತ್ತವೆ ಆದರೆ ಆಧುನಿಕ ದೃಶ್ಯ ಮಾದ್ಯಮ ಭರಾಟೆಯಲ್ಲಿ ಹಳ್ಳಿಸೊಗಡಿನ ಜಾನಪದ ಸಂಸ್ಕೃತಿ ನಶಿಸಿ ಹೋಗುತ್ತಿದೆ. ಜಾನಪದವನ್ನು ಉಳಿಸಿ ಬೆಳೆಸಲು ನಮ್ಮ ಸಂಘಟನೆ ಕಾರ್ಯಪ್ರವೃತ್ತವಾಗಿದೆ’ ಎಂದರು.

ಪ್ರಾಧ್ಯಪಕ ಬಿ.ಡಿ. ಚಿತ್ತರಗಿ, ಉಪನ್ಯಾಸಕ ಜಗದೀಶ ಹಾದಿಮನಿ, ವಿಜಯ ದಳವಾಯಿ, ಸಂಗಮೇಶ ಹೂಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.