ಕುಳಗೇರಿ ಕ್ರಾಸ್: ರಾಮದುರ್ಗ ತಾಲ್ಲೂಕಿನ ಹಿರೇಮೂಲಂಗಿ ಗ್ರಾಮದ ಗುತ್ತಿಗೆದಾರರೊಬ್ಬರು ಸಮೀಪದ ಗೋವನಕೊಪ್ಪದ ದಾಬಾವೊಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಶೇಖರಪ್ಪ ಯಂಕಪ್ಪ ಕಡಕೋಳ (42) ಮೃತರು. ಅವರು ಗುತ್ತಿಗೆಗೆ ಪಡೆದಿದ್ದ ಕಾಮಗಾರಿಯಲ್ಲಿ ಭಾರಿ ನಷ್ಟ ಅನುಭವಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಜ್ಯೋತಿ ದೂರಿನಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಾದಾಮಿ ಪಿಎಸ್ಐ ವಿಠ್ಠಲ ನಾಯಕ್ ಭೇಟಿ ನೀಡಿ, ಪರಿಶೀಲಿಸಿದರು. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.