ADVERTISEMENT

ಮಲಪ್ರಭಾ ನದಿಗೆ ಹೆಚ್ಚು ನೀರು; ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 15:58 IST
Last Updated 14 ಅಕ್ಟೋಬರ್ 2024, 15:58 IST
ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದ ಕಾರಣ ಕಮತಗಿಯ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿದೆ
ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದ ಕಾರಣ ಕಮತಗಿಯ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿದೆ   

ಕಮತಗಿ: ಎರಡು ದಿನಗಳಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಸಮೀಪದ ರಾಮಥಾಳದ ಮಲಪ್ರಭಾ ನದಿಯ ಹಳೆಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.

ಸೋಮವಾರ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಮಲಪ್ರಭಾ ತೀರದ ನಿಂಬಲಗುಂದಿ, ಕಮತಗಿ, ಬೇವಿನಾಳ, ಸುರಳಿಕಲ್ಲ ಚಿಕ್ಕಮಾಗಿ, ಹಿರೇಮಾಗಿ ಗ್ರಾಮದ ಜಮೀನುಗಳಿಗೆ ನೀರು ನುಗ್ಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಕಮತಗಿ ಪಟ್ಟಣ ಪಂಚಾಯಿತಿ ನದಿ ತೀರದ ಜನತೆ ನದಿಗೆ ತೆರಳದಂತೆ ಹಾಗೂ ತಮ್ಮ ಕೃಷಿ ಸಲಕರಣೆಗಳು ಸೇರಿದಂತೆ ಜಾನುವಾರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವಂತೆ ಸೂಚನೆ ನೀಡಿದೆ.

ADVERTISEMENT
ಕಳೆದೆರಡು ದಿನಗಳಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಸಮೀಪದ ರಾಮಥಾಳದ ಹಳೆಯ ಸೇತುವೆ ಸೋಮವಾರ ಸಂಪೂರ್ಣ ಮುಳುಗಡೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.