ಬಾಗಲಕೋಟೆ: ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ದೊರೆತಿದೆ. ಇಲ್ಲಿನ 9 ಡಿಪೋಗಳಿಂದ ಒಂದೂ ಬಸ್ ಬುಧವಾರ ನಸುಕಿನಿಂದ ರಸ್ತೆಗೆ ಇಳಿಯಲಿಲ್ಲ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿಲ್ಲ. ಸಿಬ್ಬಂದಿ ಕೆಲಸಕ್ಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಆದರೆ ಸಿಬ್ಬಂದಿ ನಿಲ್ದಾಣಗಳತ್ತ ಸುಳಿಯುತ್ತಿಲ್ಲ.
ಬಸ್ ನಿಲ್ದಾಣಗಳಿಗೆ ಬೇರೆ ಊರುಗಳಿಂದ ಬಂದ ಪ್ರಯಾಣಿಕರು ಊರಿಗೆ ತೆರಳಲು ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಿದೆ.
ಗೋವಾ ಪಣಜಿಯಿಂದ ಮುಂಜಾನೆ ಬಂದಿಳಿದ ಇಳಕಲ್‌ಗೆ ಹೋಗಬೇಕಿದ್ದ ಕುಟುಂಬವೊಂದು ಬಾಗಲಕೋಟೆ ಬಸ್ ನಿಲ್ದಾಣದಲ್ಲಿಯೇ ಉಳಿದಿದೆ. ಟಂ ಟಂ ಸೇರಿದಂತೆ ಖಾಸಗಿ ವಾಹನಗಳ ಚಾಲಕರು ಊರಿಗೆ ಕರೆದೊಯ್ಯಲು ಹೆಚ್ಚಿನ ಹಣ ಕೇಳುತ್ತಿದ್ದಾರೆ. ಮಕ್ಕಳು-ಮರಿ ಕಟ್ಟಿಕೊಂಡು ಬಂದಿದ್ದೇವೆ. ಏನು ಮಾಡುವುದು ಎಂದು ಕುಟುಂಬದ ಸದಸ್ಯೆ ರೇಖಾ ಅಳಲು ತೋಡಿಕೊಂಡರು.
ಬಾಗಲಕೋಟೆ ಬಸ್ ನಿಲ್ದಾಣದಿಂದ ನಸುಕಿನ ಐದು ಗಂಟೆಯಿಂದ ಕಾರ್ಯಾಚರಣೆ ನಡೆಸಬೇಕಿದ್ದ 16 ಬಸ್‌ಗಳು ರಸ್ತೆಗೆ ಇಳಿಯಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.