ADVERTISEMENT

ವಚನ ಸಾಹಿತ್ಯ ಅಧ್ಯಯನದಿಂದ ಬದುಕು ಆದರ್ಶಪ್ರಾಯ

ಡಾ.ಫ.ಗು.ಹಳಕಟ್ಟಿ ಜನ್ಮದಿನಾಚರಣೆ: ಪ್ರಾಚಾರ್ಯ ಎ.ವಿ.ಸೂರ್ಯವಂಶಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 14:55 IST
Last Updated 3 ಜುಲೈ 2024, 14:55 IST
ಬಸವನಬಾಗೇವಾಡಿಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಬಸವನಬಾಗೇವಾಡಿಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.   

ಬಸವನಬಾಗೇವಾಡಿ: ಕನ್ನಡ ಸಾಹಿತ್ಯ ತನ್ನ ಶ್ರೀಮಂತಿಕೆ ಮತ್ತು ವೈಭವವನ್ನು ಉಳಿಸಿಕೊಂಡಿದ್ದರ ಹಿಂದೆ ವಚನ ಸಾಹಿತ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಾಚಾರ್ಯ ಎ.ವಿ.ಸೂರ್ಯವಂಶಿ ಹೇಳಿದರು.

ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಳಕಟ್ಟಿ ಅವರು ಮನೆ ಬಾಗಿಲಿಗೆ ತೆರಳಿ ವಚನಗಳ ಕಟ್ಟನ್ನು ಪಡೆದು ಅವೆಲ್ಲವುಗಳನ್ನು ಸಂಪಾದಿಸಿ, ಸರಳೀಕರಣಗೊಳಿಸಿ ನಮಗೆ ನೀಡಿರುವುದರಿಂದ 12ನೇ ಶತಮಾನದಲ್ಲಿ ಬಸವಾದಿ ಶರಣರು ಹೇಳಿರುವ ವಿಚಾರಗಳು 21ನೇ ಶತಮಾನದಲ್ಲಿಯೂ ಕಲ್ಪವೃಕ್ಷ, ಕಾಮಧೇನುವಿನಂತೆ ನಮ್ಮ ಬದುಕಿಗೆ ದಾರಿದೀಪಗಳಾಗಿವೆ. ಪ್ರತಿಯೊಬ್ಬರೂ ವಚನ ಸಾಹಿತ್ಯವನ್ನು ಅಧ್ಯಯನ ಮಾಡಿದಾಗ ಬದುಕು ಆದರ್ಶಪ್ರಾಯವಾಗುತ್ತದೆ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.