ADVERTISEMENT

ಮಹಾಲಿಂಗಪುರ ಪಟ್ಟಣದಲ್ಲಿ 34 ಮತಗಟ್ಟೆ ಸ್ಥಾಪನೆ: ಈರಣ್ಣ ದಡ್ಡಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 14:27 IST
Last Updated 23 ಏಪ್ರಿಲ್ 2024, 14:27 IST
ಮಹಾಲಿಂಗಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಭೇಟಿ ನೀಡಿದರು
ಮಹಾಲಿಂಗಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಭೇಟಿ ನೀಡಿದರು   

ಮಹಾಲಿಂಗಪುರ: ‘ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕಾಗಿ ಪಟ್ಟಣದಲ್ಲಿ 34 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತದಾನ ಜಾಗೃತಿ ಕುರಿತು ಮತಗಟ್ಟೆಗಳನ್ನು ವರ್ಲಿ ಚಿತ್ರಗಳಿಂದ ಸಿಂಗರಿಸಲಾಗಿದೆ’ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ತಿಳಿಸಿದರು.

ಪಟ್ಟಣದಲ್ಲಿ ಸ್ಥಾಪಿಸಲಾದ ವಿವಿಧ ಮತಗಟ್ಟೆಗಳಿಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, ಮತಗಟ್ಟೆಗಳಲ್ಲಿ ವಿಶ್ರಾಂತಿ ಕೊಠಡಿ, ರ‍್ಯಾಂಪ್, ಕುಡಿಯುವ ನೀರು ಹಾಗೂ ಅಗತ್ಯ ಇರುವ ಮತಗಟ್ಟೆಗಳಲ್ಲಿ ಶಾಮಿಯಾನ ವ್ಯವಸ್ಥೆ ಮಾಡಲಾಗುವುದು. ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಕೆಂಗೇರಿಮಡ್ಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 192ನೇ ಮತಗಟ್ಟೆಯನ್ನು ಸಖಿ ಮತಗಟ್ಟೆಯಾಗಿ ಪರಿವರ್ತಿಸಲಾಗುವುದು ಎಂದರು.

ಮತದಾನ ಜಾಗೃತಿ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಾಥಾ, ರಂಗೋಲಿ ಬಿಡಿಸುವ ಕಾರ್ಯಕ್ರಮ, ಬೈಕ್ ರ‍್ಯಾಲಿ, ಮನೆ ಮನೆಗೆ ಕರಪತ್ರ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.

ADVERTISEMENT

ಸಿಆರ್‌ಪಿ ಎಸ್.ಎನ್.ಬ್ಯಾಳಿ, ಪುರಸಭೆ ವ್ಯವಸ್ಥಾಪಕ ಎಸ್.ಎನ್.ಪಾಟೀಲ, ಚಿದಾನಂದ ಮಠಪತಿ, ಎಂ.ಎಂ.ಮುಗಳಖೋಡ, ಎಂ.ಎಸ್.ಮುಲ್ಲಾ, ಶಿವಾನಂದ ಬುರುಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.