ADVERTISEMENT

ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಜಗದೀಶ ಗುಡಗುಂಟಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 14:07 IST
Last Updated 4 ಜುಲೈ 2024, 14:07 IST
ಜಮಖಂಡಿಯ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ –1 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಗುಡಗುಂಟಿ ಮಾತನಾಡಿದರು
ಜಮಖಂಡಿಯ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ –1 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಗುಡಗುಂಟಿ ಮಾತನಾಡಿದರು   

ಜಮಖಂಡಿ: 'ಸರ್ಕಾರವು ಶೈಕ್ಷಣಿಕ ಅಭಿವೃದ್ದಿಗೆ ಬಿಸಿಯೂಟ, ಪುಸ್ತಕ, ಸಮವಸ್ತ್ರ ಸೇರಿದಂತೆ ಹಲವು ಯೋಜನೆಯೊಂದಿಗೆ ವಿಶೇಷ ಅನುದಾನ ನೀಡುತ್ತಿದೆ ವಿದ್ಯಾರ್ಥಿಗಳು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದುಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ಇಲ್ಲಿನ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ-1 ರಲ್ಲಿ ಮಂಗಳವಾರ ಗಣಕ ಶಿಕ್ಷಣ ಕೇಂದ್ರ ಉದ್ಘಾಟಿಸಿ ಮಾತನಾಡಿ, ‘ಮಕ್ಕಳು ಧರ್ಮ ಸಂಸ್ಕೃತಿ ಪರಂಪರೆಯ ಜೊತೆಗೆ ಸಮಯ ಪ್ರಜ್ಞೆಯನ್ನು ಅಳವಡಿಸಿಕೊಳ್ಳಬೇಕು’ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ರಮೇಶ ಅವಟಿ ಮಾತನಾಡಿ, ವಿದ್ಯಾರ್ಥಿಗಳು ಗಣಕ ಯಂತ್ರಗಳ ಉಪಯೋಗ ಮಾಡಿಕೊಂಡು ಹೆಚ್ಚಿನ ಜ್ಞಾನ ಸಂಪಾದಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತೀರ್ಣರಾಗಬೇಕು’ ಎಂದು ಹೇಳಿದರು.

ADVERTISEMENT

ಶಾಲೆಯ ಹಳೆ ವಿದ್ಯಾರ್ಥಿಗಳಾದ ಪತ್ರಕರ್ತ ಮಲ್ಲಿಕಾರ್ಜುನ ಮಠ, ಶಿವಾನಂದ ಕೊಣ್ಣೂರ, ಶಿಕ್ಷಕಿ ದಾನಮ್ಮ ಪಂಚಕಟ್ಟಿಮಠ ಮಾತನಾಡಿದರು.

 ಎಸ್‌ಡಿಎಂಸಿ ಅಧ್ಯಕ್ಷ ಆಶ್ರಪಅಲಿ ಖಾದ್ರಿ, ಪ್ರಕಾಶ ಅರಕೇರಿ, ಎಂ.ಐ.ಮಮದಾಪೂರ ಇದ್ದರು. ಎನ್.ಆರ್.ಕುಲಕರ್ಣಿ ಸ್ವಾಗತಿಸಿದರು, ಶಿಕ್ಷಕ ಪಿ.ಆರ್. ಜಕಾತಿ ನಿರೂಪಿಸಿದರು. ಶಿಕ್ಷಕಿ ಎಲ್.ಎಸ್.ಮೊಕಾಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.