ADVERTISEMENT

ಸಿಎಂ, ಡಿಸಿಎಂ ಹುದ್ದೆ ಕುರಿತು ಸಾರ್ವಜನಿಕ ಚರ್ಚೆ ಸರಿಯಲ್ಲ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 7:46 IST
Last Updated 28 ಜೂನ್ 2024, 7:46 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಬಾಗಲಕೋಟೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ ಕುರಿತು ಪಕ್ಷದ ನಾಯಕರು ಸಾರ್ವಜನಿಕ ಚರ್ಚೆ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಸಚಿವರು ವಿನಾಕಾರಣ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಇರುವಾಗ ಮತ್ತೆ ಆ ಹುದ್ದೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕಾದ ವಿಷಯಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯ ‌ವ್ಯಕ್ತಪಡಿಸುತ್ತಿದ್ದಾರೆ ಎಂದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.