ADVERTISEMENT

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ: ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 14:55 IST
Last Updated 22 ಡಿಸೆಂಬರ್ 2023, 14:55 IST
<div class="paragraphs"><p>ಸಚಿವ ಆರ್.ಬಿ. ತಿಮ್ಮಾಪುರ</p></div>

ಸಚಿವ ಆರ್.ಬಿ. ತಿಮ್ಮಾಪುರ

   

ಬಾಗಲಕೋಟೆ: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಾಗುವುದು. ಸರ್ಕಾರದ ಮೇಲೆ ವಿಶ್ವಾಸ ಇರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿಗೆ ಧರಣಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಚುನಾವಣೆ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ವಿಷಯ ಹೇಳಿದ್ದೆವು. ಈಗ ನಮ್ಮದೇ ಸರ್ಕಾರ ರಚನೆಯಾಗಿದ್ದು, ಶೀಘ್ರ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು ಎಂದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಸದಸ್ಯ ಚಂದ್ರಶೇಖರ ಕಾಳನ್ನವರ, ಪ್ರೊ.ಸಂಗಮೇಶ ಬ್ಯಾಳಿ, ಮನೋಹರ ಪೂಜಾರ, ಭಾರತಿ ರಾಠೋಡ, ವಿಜಯಕುಮಾರ ಗಂಗಲ್, ಮುತ್ತು ಬಡಿಗೇರ, ಹನಮಂತ ಬೋವಿ, ಗುರುರಾಜ ರಾಠೋಡ, ಶಶಿಧರ ಪುಜಾರ, ಸುನೀಲ ಮಠಪತಿ, ಭಾರತಿ ರಾಠೋಡ, ಕರಿಗೌಡರ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.