ಬಾಗಲಕೋಟೆ: ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐ ನಂತಹ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಬುಧವಾರ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದರು.
ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಬಹುಮತದಿಂದ ಅಧಿಕಾರ ನಡೆಸುತ್ತಿರುವ ರಾಜ್ಯ ಸರ್ಕಾರಗಳಲ್ಲಿನ ಆಡಳಿತ ಪಕ್ಷದ ಸದಸ್ಯರನ್ನು ರಾಜೀನಾಮೆ ಕೊಡಿಸಿ, ಸರ್ಕಾರ ಪತನಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದು ದೂರಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಮುಡಾ ಪ್ರಕರಣದಲ್ಲಿ ಎಫ್‌ಐಆರ್ ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡ ನಿಗದಿಪಡಿಸಿದರೆ ಸಿದ್ದರಾಮಯ್ಯ ಮಾತ್ರವಲ್ಲ, ನರೇಂದ್ರ ಮೋದಿ ಅವರ ಸಂಪುಟದ 23 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಕೂಡಲೇ ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಸಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ, ರಾಜಭವನದ ಮೂಲಕ ಸರ್ಕಾರ ಪತನಗೊಳಿಸಲು ಪ್ರಯತ್ನಿಸುತ್ತಿದೆ. ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕಿದೆ ಎಂದರು.
ಮುಖಂಡರಾದ ಪರಶುರಾಮ ಕಾಂಬಳೆ, ಬಸವರಾಜ ಹಳ್ಳದಮನಿ, ರವಿ ಕಾಂಬಳೆ, ಕಾಸಿಂಅಲಿ ಗೋಠೆ, ರಮೇಶ ಅನಗವಾಡಿ, ಬಸವರಾಜ ಪಾತ್ರೋಟ, ಸದಾಶಿವ ಐನಾಪುರ, ಬಸವರಾಜ ದೊಡಮನಿ, ಎಚ್.ಎನ್. ನೀಲನಾಯಕ, ಮಾರುತಿ ಚಿಕ್ಕಾಲಗುಂಡಿ, ಹುಲ್ಲಪ್ಪ ಅಂಟರಠಾಣ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.