ADVERTISEMENT

ಪ್ರವಾಸೋದ್ಯಮ ಇಲಾಖೆ | ₹6.08 ಕೋಟಿ ಹಣ ಅಕ್ರಮ ವರ್ಗಾವಣೆ: ಎಚ್‌.ಕೆ. ಪಾಟೀಲ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2024, 0:24 IST
Last Updated 4 ಆಗಸ್ಟ್ 2024, 0:24 IST
ಎಚ್.ಕೆ.ಪಾಟೀಲ
ಎಚ್.ಕೆ.ಪಾಟೀಲ   

ಬಾಗಲಕೋಟೆ: ‘ಐಡಿಬಿಐ ಬ್ಯಾಂಕ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

‘ಪ್ರವಾಸೋದ್ಯಮ ಇಲಾಖೆಯಲ್ಲಿ ₹2.47 ಕೋಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ₹79.75 ಲಕ್ಷ, ಪಂಚಾಯತ್‌ರಾಜ್‌ ಇಲಾಖೆಯಲ್ಲಿ ₹86.40 ಲಕ್ಷ, ಕೈಮಗ್ಗ ಮತ್ತು ಜವಳಿಯಲ್ಲಿ ₹17.81 ಲಕ್ಷ, ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ₹1.76 ಲಕ್ಷ ಸೇರಿ ಒಟ್ಟು ₹6.08 ಕೋಟಿ ಅಕ್ರಮವಾಗಿ ವರ್ಗಾವಣೆ
ಯಾಗಿದ್ದು ಪತ್ತೆಯಾಗಿದೆ’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಐಡಿಬಿಐ ಬ್ಯಾಂಕ್‌ನ ಇಬ್ಬರು ಅಧಿಕಾರಿಗಳು ಅಮಾನತು ಆಗಿದ್ದಾರೆ. ವಾರದಲ್ಲಿ ಹಣವನ್ನು ಸರ್ಕಾರಕ್ಕೆ ವಾಪಸ್ ಮಾಡಲು ಕ್ರಮಕೈಗೊಳ್ಳುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಇಲಾಖೆಗಳಲ್ಲಿಯೂ ಪರಿಶೀಲಿಸಲು ಸೂಚಿಸಲಾಗಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.