ADVERTISEMENT

ಜಮಖಂಡಿ: ಕೃಷ್ಣಾ ನದಿಗೆ ನೀರು ಹರಿಸಲು ಕೇಂದ್ರಕ್ಕೆ ಒತ್ತಡ

₹2.90 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2024, 15:37 IST
Last Updated 15 ಮಾರ್ಚ್ 2024, 15:37 IST
ಜಮಖಂಡಿ ನಗರದ ಹುನ್ನೂರ ರಸ್ತೆಯಲ್ಲಿ ಸ್ವಾಗತ ಕಮಾನ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ನೆರವೇರಿಸಿದರು
ಜಮಖಂಡಿ ನಗರದ ಹುನ್ನೂರ ರಸ್ತೆಯಲ್ಲಿ ಸ್ವಾಗತ ಕಮಾನ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ನೆರವೇರಿಸಿದರು   

ಜಮಖಂಡಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಂದಾಜು 26 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ನಗರದ ವಿವಿಧ ಕಾಲೊನಿಗಳಲ್ಲಿ ಶುಕ್ರವಾರ ನಡೆದ ನಗರೋಥ್ಥಾನ ಯೋಜನೆ ಅನುದಾನದಡಿಯಲ್ಲಿ ₹2.90 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಸರ್ಕಾರದಿಂದ ಬರುವ ಅನುದಾನದಲ್ಲಿ ನಗರದ ಜನತೆಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ, ಹಂತ ಹಂತವಾಗಿ ಅಭಿವೃದ್ದಿ ಪಡಿಸಲಾಗುವುದು’ ಎಂದರು.

ADVERTISEMENT

‘ಕೃಷ್ಣಾ ನದಿಗೆ ನೀರು ಹರಿಸುವಂತೆ ವಿರೋಧ ಪಕ್ಷದ ನಾಯಕರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬರುವ ದಿನಗಳಲ್ಲಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ನಿಟ್ಟಿನಲ್ಲಿ ಒತ್ತಡ ತರಲಾಗುವುದು’ ಎಂದು ತಿಳಿಸಿದರು.

ಪೌರಾಯುಕ್ತೆ ಲಕ್ಷ್ಮೀ ಅಷ್ಟಗಿ, ಅಜಯ ಕಡಪಟ್ಟಿ, ಯಮನೂರ ಮೂಲಂಗಿ, ರಾಜೇಸಾಬ ಕಡಕೋಳ, ವಿಶ್ವಾಸ ಪಾಟೀಲ, ಶಿವಕುಮಾರ ನಾಯಕ, ಶ್ರೀಧರ ಕಂಬಿ, ಸಾವಿತ್ರಿ ಗೊರನಾಳ, ಸಿ.ಎನ್.ರುದ್ರಸ್ವಾಮಿಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.