ಖಾನಾಪುರ: ಇಲ್ಲಿನ ಬೆಳಗಾವಿ– ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಆಮಂತ್ರಣ ಲಾಡ್ಜ್ ಮೇಲೆ ದಾಳಿ ಪೊಲೀಸರು ಬುಧವಾರ ದಾಳಿ ನಡೆಸಿ, ವೇಶ್ಯಾವಟಿಕೆಯಲ್ಲಿ ತೊಡಗಿದ್ದ 11 ಜನರನ್ನು ವಶಕ್ಕೆ ಪಡೆದಿದ್ದಾರೆ. ಐವರು ಮಹಿಳೆಯರನ್ನು ರಕ್ಷಿಸಿ, ಬೆಳಗಾವಿಯ ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.
ಲಾಡ್ಜ್ ಮಾಲೀಕ ವಿನಾಯಕ ಲಕ್ಷ್ಮಣ ಮಾಂಜರೇಕರ ವಿರುದ್ಧ ಖಾನಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್‌ಸ್ಪೆಕ್ಟರ್ ಮಂಜುನಾಥ ನಾಯ್ಕ, ಸಬ್ ಇನ್‌ಸ್ಪೆಕ್ಟರ್ ಚನ್ನಬಸವ ಬಬಲಿ ನೇತೃತ್ವದ ತಂಡ ಕಾರ್ಯಾಚರಣೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.