ADVERTISEMENT

ಕಲಾದಗಿ | ರಂಭಾಪುರಿ ಶ್ರೀ ವಿರುದ್ಧ ಪ್ರತಿಭಟನೆ: 59 ಜನರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 15:40 IST
Last Updated 18 ಫೆಬ್ರುವರಿ 2024, 15:40 IST
ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಮಠಕ್ಕೆ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಭೇಟಿ ನೀಡಿದರು
ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಮಠಕ್ಕೆ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಭೇಟಿ ನೀಡಿದರು   

ಕಲಾದಗಿ (ಬಾಗಲಕೋಟೆ ಜಿಲ್ಲೆ): ‘ಗ್ರಾಮದಲ್ಲಿ ಶನಿವಾರ ನಡೆದ ರಂಭಾಪುರಿ ಶ್ರೀಗಳ ವಿರುದ್ಧ ಪ್ರತಿಭಟನೆಗೆ ಸಂಬಂಧಿಸಿದಂತೆ 59 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಮರನಾಥ ರಡ್ಡಿ ಹೇಳಿದರು.

‘ಶ್ರೀಗಳ ಸಂಚಾರಕ್ಕೆ ಅಡೆ–ತಡೆ ಮಾಡಿ ಕಾನೂನು ಕೈಗೆ ತೆಗೆದುಕೊಂಡಿದ್ದು, ಚಪ್ಪಲಿ ಎಸೆತ, ಸಂಘಟಿತರಾಗಿ ಪ್ರತಿಭಟನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.  ಗುರುಲಿಂಗೇಶ್ವರ ಮಠದ ಪೀಠಾಧಿಪತಿ ನೇಮಕ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ನ್ಯಾಯಾಲಯ ಸದ್ಯಕ್ಕೆ ನೀಡಿರುವ ಆದೇಶದಂತೆ ಎಲ್ಲರೂ ನಡೆದುಕೊಳ್ಳಬೇಕಾಗುತ್ತದೆ. ಯಾರಾದರೂ ಇದಕ್ಕೂ ಮೀರಿ  ನಡೆದುಕೊಂಡು ಅಶಾಂತಿ ಉಂಟು ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಠದ ಬಳಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ’ ಎಂದರು.

ADVERTISEMENT

ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನದ ಹಿರೇಮಠದಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯ ಹಾಗೂ ಗರ್ಭಗುಡಿ ವೀಕ್ಷಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.