ಜಮಖಂಡಿ: ಪಂಚಮಸಾಲಿ ಸಮಾಜದ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೀಸಾಲತಿ ಬೇಡಿಕೆ ಈಡೇರಿಸಬೇಕು. ಮೊದಲ ಅಧಿವೇಶನ ಮುಗಿದ ಬಳಿಕ ಬೇಡಿಕೆ ಈಡೇರಿಸುವುದಾಗಿ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ತಪ್ಪಿದ್ದಾರೆ. ಹೀಗಾಗಿ, ಆರನೇ ಹಂತದ ಹೋರಾಟ ಅನಿವಾರ್ಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಸಹಯೋಗದಲ್ಲಿ ಸೋಮವಾರ ಬಸವೇಶ್ವರ ವೃತ್ತದ ಹತ್ತಿರ ರಾಜ್ಯ ಹೆದ್ದಾರಿ ಮೇಲೆ ಜಿಲ್ಲಾ ಮಟ್ಟದ ಸಾಮೂಹಿಕ ಇಷ್ಟಲಿಂಗ ಪೂಜೆ ಮೂಲಕ ಮೀಸಲಾತಿ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಉಪ ಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಿ ಆಗಲಿ. 2ಎ ಮೀಸಲಾತಿ ಹೋರಾಟಕ್ಕೆ ಶಕ್ತಿ ಬರಲಿ, ಬರಗಾಲ ನಿವಾರಣೆಯಾಗಿ ರೈತರ ಸಂಕಷ್ಟ ದೂರವಾಗಲಿ, ನೂತನ ಸರ್ಕಾರ ಮೀಸಲಾತಿ ನೀಡಲಿ ಎಂದೂ ಪ್ರಾರ್ಥಿಸುತ್ತೇವೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೀಣಾ ಕಾಶಪ್ಪನವರ, ಅಧ್ಯಕ್ಷ ಮಹಾದೇವ ಇಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಏಗಪ್ಪ ಸವದಿ ಸೇರಿದಂತೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.