ADVERTISEMENT

ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯ: ಶಾಸಕ ಸಿದ್ದು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 15:33 IST
Last Updated 21 ನವೆಂಬರ್ 2024, 15:33 IST
ರಬಕವಿ ಬನಹಟ್ಟಿ ಸಮೀಪದ ಹಿಪ್ಪರಗಿಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಪ್ರವೀಣ ಕಂಠಿ ರಾಜ್ಯಮಟ್ಟದ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಶಾಸಕ ಸಿದ್ದು ಸವದಿ ಸನ್ಮಾನಿಸಿದರು
ರಬಕವಿ ಬನಹಟ್ಟಿ ಸಮೀಪದ ಹಿಪ್ಪರಗಿಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಪ್ರವೀಣ ಕಂಠಿ ರಾಜ್ಯಮಟ್ಟದ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಶಾಸಕ ಸಿದ್ದು ಸವದಿ ಸನ್ಮಾನಿಸಿದರು   

ರಬಕವಿ ಬನಹಟ್ಟಿ: ‘ವಸತಿ ಶಾಲೆಯ ಮಕ್ಕಳಿಗೆ ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ’ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಇಲ್ಲಿನ ತಹಶೀಲ್ದಾರ್ ಕಾರ್ಯಾಲಯಲದಲ್ಲಿ ರಾಜ್ಯಮಟ್ಟದ ಮೂರು ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪ್ರವೀಣ ಕಂಠಿ ಅವರನ್ನು ಸನ್ಮಾನಿಸಿ ಮಾತನಾಡಿದರು.

‘ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರ ಗಮನ ನೀಡಬೇಕು’ ಎಂದು ತಿಳಿಸಿದರು.

ADVERTISEMENT

ವಸತಿ ಶಾಲೆಯ ಪ್ರಾಚಾರ್ಯ ಎಸ್.ಎನ್.ದೇಮಣ್ಣನವರ ಮಾತನಾಡಿ, ‘ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪ್ರವೀಣ ಭಾಗವಹಿಸಲಿದ್ದಾರೆ’ ಎಂದರು.

ತಹಶೀಲ್ದಾರ್ ಗಿರೀಶ ಸ್ವಾದಿ, ದೈಹಿಕ ಶಿಕ್ಷಕ ಎ.ಆರ್. ಹಿಪ್ಪರಗಿ, ಶಿರಸ್ತೆದಾರ ರಾಜಶೇಖರ ಸಾತಿಹಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.