ಬಾಗಲಕೋಟೆ: ಪೊಲೀಸ್ ಬಿಗಿಬಂದೋಬಸ್ತಿನಲ್ಲಿ ನಗರದ ಲಯನ್ಸ್ ಸರ್ಕಲ್ ಬಳಿ ಕೂಡಿಸಿರುವ ಛತ್ರಪತಿ ಶಿವಾಜಿ ಮೂರ್ತಿ ಬುಧವಾರ ರಾತ್ರಿ ತೆರವುಗೊಳಿಸಲಾಯಿತು.
ಮೂರ್ತಿ ತೆರವುಗೊಳಿಸದಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರಾದ ನಾರಾಯಣ ಭಾಂಡಗೆ, ಬಸವರಾಜ ಯಂಕಂಚಿ, ರಾಜು ನಾಯ್ಕರ ಮತ್ತಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧನ ಸಂದರ್ಭದಲ್ಲಿ ಮೂರ್ತಿ ಪ್ರತಿಷ್ಠಾಪನಾ ಸಮಿತಿ ಉಪಾಧ್ಯಕ್ಷ ನಾರಾಯಣ ಭಾಂಡಗೆ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠ ಏಕವಚನದಲ್ಲಿ ಮಾತನಾಡಿಸಿದರು ಎಂದು ವಾಗ್ವಾದ ನಡೆಯಿತು.
ಇದಕ್ಕೂ ಮುನ್ನ ಶಿವಾಜಿ ಮೂರ್ತಿ ತೆರವುಗೊಳಿಸಬಾರದು ಎಂದು ಆಗ್ರಹಿಸಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ಸಮಿತಿ ಮುಖಂಡರು ಹಾಗೂ ನಗರಸಭೆ ಸದಸ್ಯರು ಬುಧವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.
‘ಈಗ ಮೂರ್ತಿ ಕೂಡಿಸಿರುವ ಜಾಗದಲ್ಲಿ 18 ಅಡಿ ಎತ್ತರದ ಬೃಹತ್ ಮೂರ್ತಿ ಪ್ರತಿಷ್ಠಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮೂರ್ತಿಯೂ…
[10:55 pm, 16/08/2023] +91 87621 54210: ನಿಷೇಧಾಜ್ಞೆ ಜಾರಿ
ಬಾಗಲಕೋಟೆ: ನಗರದ ಲಯನ್ಸ್ ಸರ್ಕಲ್ ಬಳಿ ಛತ್ರಪತಿ ಶಿವಾಜಿ ಮೂರ್ತಿಯನ್ನು ಅನಧಿಕೃತವಾಗಿ ಕೂಡಿಸಲಾಗಿದೆ. ಆದ್ದರಿಂದ ಅದನ್ನು ತೆರವುಗೊಳಿಸಬೇಕಾಗಿರುವುದರಿಂದ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ.16ರಿಂದ ಆ.18ರ ಮಧ್ಯರಾತ್ರಿಯವರೆಗೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿ
ಬಾಗಲಕೋಟೆ ನಗರದ ಲಯನ್ಸ್ ಸರ್ಕಲ್ ಬಳಿ ಛತ್ರಪತಿ ಶಿವಾಜಿ ಮೂರ್ತಿಯನ್ನು ಅನಧಿಕೃತವಾಗಿ ಕೂಡಿಸಲಾಗಿದೆ. ಆದ್ದರಿಂದ ಅದನ್ನು ತೆರವುಗೊಳಿಸಬೇಕಾಗಿರುವುದರಿಂದ ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ.16ರಿಂದ ಆ.18ರ ಮಧ್ಯರಾತ್ರಿಯವರೆಗೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.