ಬಾದಾಮಿ: ತಾಲ್ಲೂಕಿನಲ್ಲಿರುವ ಮಲಪ್ರಭಾ ನದಿಯ ಒಡಲು ಖಾಲಿಯಾಗಿ ಕುಡಿಯುವ ನೀರಿಗಾಗಿ ಜನರು ಮತ್ತು ಜಾನುವಾರುಗಳು ಪರಿತಪಿಸುವಂತಾಗಿದೆ.
ಜನವರಿ ಕೊನೆಯ ವಾರದಲ್ಲಿ ನವಿಲುತೀರ್ಥ ಜಲಾಶಯದಿಂದ ನೀರು ಬಿಡಲಾಗಿತ್ತು. ಆದರೆ ಈಗ ಮತ್ತೆ ಸಂಪೂರ್ಣವಾಗಿ ನದಿ ಬತ್ತಿದೆ. ನದಿ ದಂಡೆಯಲ್ಲಿ 45ಕ್ಕೂ ಅಧಿಕ ಗ್ರಾಮಗಳ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ.
ಒಂದು ಟಿಎಂಸಿ ನೀರು ಬಿಡುವಂತೆ ತಾಲ್ಲೂಕಿನ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ನೀರಾವರಿ ಇಲಾಖೆ ಮತ್ತು ತಹಶೀಲ್ದಾರ್‌ಗೆ ಮನವಿ ನೀಡಿ ಆಗ್ರಹಿಸಿದ್ದಾರೆ.
‘ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡಲು ಸಂಬಂಧಿಸಿದ ಹಿರಿಯ ಅಧಿಕಾರಿಗೆ ಪತ್ರ ಬರೆಯಲಾಗಿದೆ’ ಎಂದು ನೀರಾವರಿ ಇಲಾಖೆಯ ಎಂಜಿನಿಯರ್ ರುದ್ರಪ್ಪ ಹಲಗತ್ತಿ ಮಂಗಳವಾರ ಪತ್ರಿಕೆಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.