ADVERTISEMENT

ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಮುಂದುವರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 15:33 IST
Last Updated 12 ಜುಲೈ 2023, 15:33 IST
ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸದಂತೆ ಆಗ್ರಹಿಸಿ ತೇರದಾಳದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಉಪತಹಶೀಲ್ದಾರ್ ಶ್ರೀಕಾಂತ ಮಾಯನ್ನವರಿಗೆ ಮನವಿ ಸಲ್ಲಿಸಿದರು
ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸದಂತೆ ಆಗ್ರಹಿಸಿ ತೇರದಾಳದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಉಪತಹಶೀಲ್ದಾರ್ ಶ್ರೀಕಾಂತ ಮಾಯನ್ನವರಿಗೆ ಮನವಿ ಸಲ್ಲಿಸಿದರು   

ತೇರದಾಳ: ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸದೆ, ಮುಂದುರಿಸಬೇಕು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದರು.

ಪಟ್ಟಣದ ವಿಶೇಷ ತಹಶೀಲ್ದಾರ್ ಕಚೇರಿ ಎದುರು ಬುಧವಾರ ಜಮಾಯಿಸಿದ ಕಾರ್ಯಕರ್ತರು, ಪಠ್ಯಪುಸ್ತಕದಲ್ಲಿ ರಾಷ್ಟ್ರನಾಯಕರಿಗೆ ಸಂಬಂಧಿಸಿದ ಪಾಠಗಳನ್ನು ಕೈಬಿಡದಂತೆ ಉಪತಹಶೀಲ್ದಾರ್ ಶ್ರೀಕಾಂತ ಮಾಯನ್ನವರಿಗೆ ಮನವಿ ಸಲ್ಲಿಸಿದರು.

ಶ್ರೀರಾಮ ಸೇನೆಯ ಸದಾಶಿವ ಮಾಳಿ, ಸಂದೀಪ ರಸಾಳ, ಪ್ರವೀಣ ಮಿರ್ಜಿ, ಪ್ರಭು ಪರೀಟ, ವಿಜಯ ಅರಬಾವಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.