ADVERTISEMENT

ವಾಲ್ಮೀಕಿ ಜಯಂತಿ ನಾಳೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 21:08 IST
Last Updated 15 ಅಕ್ಟೋಬರ್ 2024, 21:08 IST

ಬೀಳಗಿ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅ. 17ರಂದು ಬೆಳಗ್ಗೆ 11ಕ್ಕೆ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ನಡೆಯಲಿದೆ.

ಬೆಳಿಗ್ಗೆ 8:30ಕ್ಕೆ ವೀರ ಸಿಂಧೂರ ಲಕ್ಷ್ಮಣ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ ಎಂದು ತಹಶೀಲ್ದಾರ್ ವಿನೋದ ಹತ್ತಳ್ಳಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸುವರು. ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಜೆ.ಟಿ. ಪಾಟೀಲ್ ಅಧ್ಯಕ್ಷತೆ ವಹಿಸುವರು. ಬೆಳಗಾವಿ ವಿಭಾಗೀಯ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಮಹಾದೇವ ಹಾದಿಮನಿ ಉಪನ್ಯಾಸ ನೀಡುವರು. ಅತಿಥಿಗಳಾಗಿ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಶಾಸಕರಾದ ಎಚ್.ವೈ. ಮೇಟಿ, ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಎಚ್.ಆರ್. ನಿರಾಣಿ, ಸುನೀಲ ಗೌಡ ಪಾಟೀಲ, ಪಿ.ಎಚ್. ಪೂಜಾರ, ಉಮಾಶ್ರೀ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT