ADVERTISEMENT

ರಾಜ್ಯಮಟ್ಟದ ವಾಲಿಬಾಲ್ ಟೂರ್ನಿ 1ರಿಂದ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 16:04 IST
Last Updated 29 ಜೂನ್ 2024, 16:04 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತೇರದಾಳ: ಇಲ್ಲಿಯ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ದಾನಿಗೊಂಡ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ವ್ಯಾಪ್ತಿಗಳ ಆಯುರ್ವೇದಿಕ್‌ ಮೆಡಿಕಲ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಟೂರ್ನಿಗಳು ಜುಲೈ 1ರಿಂದ 3ರವರೆಗೆ ನಡೆಯಲಿವೆ.

ಈ ಟೂರ್ನಿಯಲ್ಲಿ 85 ಪುರುಷ ಹಾಗೂ 35 ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. ಪಂದ್ಯಾವಳಿಗಳ ಉದ್ಘಾಟನಾ ಸಮಾರಂಭ ಜುಲೈ 1ರಂದು ಬೆಳಿಗ್ಗೆ 10ಕ್ಕೆ ನಡೆಯಲಿದ್ದು ಸಂಸ್ಥೆಯ ಅದ್ಯಕ್ಷ ಡಾ. ಮಹಾವೀರ ದಾನಿಗೊಂಡ ಅಧ್ಯಕ್ಷತೆ ವಹಿಸುವರು. ವ್ಯವಸ್ಥಾಪಕ ನಿರ್ದೇಶಕ ಡಾ. ಪುಷ್ಪದಂತ ದಾನಿಗೊಂಡ ಮತ್ತು ಪ್ರಾಚಾರ್ಯ ಡಾ. ಪ್ರಭಾಕರ ಅಪರಾಜ, ದೈಹಿಕ ಶಿಕ್ಷಣ ನಿರ್ದೇಶಕ ರಾಮು ಹಾಡಕರ ಪಾಲ್ಗೊಳ್ಳುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.