ADVERTISEMENT

ನದಿ ನೀರು ಇಳಿಮುಖ: ರೈತರ ಆತಂಕ ದೂರ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 16:30 IST
Last Updated 15 ಅಕ್ಟೋಬರ್ 2024, 16:30 IST

ಮತಗಿ (ಅಮೀನಗಡ): ಕಳೆದೆರಡು ದಿನಗಳಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಸೋಮವಾರ ಸಮೀಪದ ರಾಮಥಾಳದ ಮಲಪ್ರಭಾ ನದಿಯ ಹಳೆಯ ಸೇತುವೆ ಸಂಪೂರ್ಣ ಮುಳುಗಡೆಯಾಗಿ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿ ರೈತರಲ್ಲಿ ಆತಂಕ ಮೂಡಿಸಿತ್ತು.

ಆದರೇ ಮಂಗಳವಾರ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಮಲಪ್ರಭಾ ನದಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿ ಜಮೀನುಗಳಿಗೆ ನುಗ್ಗಿದ ನೀರು ಖಾಲಿಯಾಗಿ ರೈತರಲ್ಲಿ ಮೂಡಿದ್ದ ಆತಂಕ ಕಡಿಮೆಯಾಗಿ ನಿಟ್ಟುಸಿರು ಬಿಡುವಂತಾಗಿದೆ.

ಸೋಮವಾರ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಮಲಪ್ರಭಾ ತೀರದ ನಿಂಬಲಗುಂದಿ, ಕಮತಗಿ,
ಬೇವಿನಾಳ, ಇನಾಂಬೂದಿಹಾಳ, ಸುರಳಿಕಲ್ಲ ಚಿಕ್ಕಮಾಗಿ, ಹಿರೇಮಾಗಿ ಗ್ರಾಮದ ಜಮೀನುಗಳಿಗೆ ನೀರು ನುಗ್ಗಿ ರೈತರಲ್ಲಿ ಆತಂಕ ಮೂಡಿಸಿತ್ತು. ಸದ್ಯ ನದಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು ರೈತರು ನಿಟ್ಟುಸಿರು ಬಿಡುವಂತಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.