ADVERTISEMENT

ಬಳ್ಳಾರಿಯಲ್ಲಿ 92,316 ನಕಲಿ ಮತದಾರರು: ಬಿಜೆಪಿ ನಾಯಕರ ಆರೋಪ

ಬಿಜೆಪಿ ನಾಯಕರ ಆರೋಪ, ಪರಿಶೀಲಿಸಿ ಕ್ರಮ ಕೈಗೊಳ್ಳಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 16:12 IST
Last Updated 5 ಮಾರ್ಚ್ 2024, 16:12 IST
ಬಿಜೆಪಿಯ ಪ್ರಣಾಳಿಕೆಗೆ ಸಂಬಂಧಿಸಿದ ಸಂಕಲ್ಪ ಪತ್ರವನ್ನು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌, ಮಾಜಿ ಶಾಸಕ ಎಸ್‌.ಟಿ ಸೋಮಶೇಖರ್‌, ಪರಿಷತ್‌ ಸದಸ್ಯರಾದ ವೈ. ಎಂ ಸತೀಶ್‌, ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಅನಿಲ್‌ ಕುಮಾರ್‌ ಮೋಕ ಮತ್ತಿತರರು ಬಿಡುಗಡೆ ಮಾಡಿದರು
ಬಿಜೆಪಿಯ ಪ್ರಣಾಳಿಕೆಗೆ ಸಂಬಂಧಿಸಿದ ಸಂಕಲ್ಪ ಪತ್ರವನ್ನು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌, ಮಾಜಿ ಶಾಸಕ ಎಸ್‌.ಟಿ ಸೋಮಶೇಖರ್‌, ಪರಿಷತ್‌ ಸದಸ್ಯರಾದ ವೈ. ಎಂ ಸತೀಶ್‌, ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಅನಿಲ್‌ ಕುಮಾರ್‌ ಮೋಕ ಮತ್ತಿತರರು ಬಿಡುಗಡೆ ಮಾಡಿದರು   

ಬಳ್ಳಾರಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 92,316 ನಕಲಿ ಮತದಾರರಿದ್ದು, ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಡಳಿತಕ್ಕೆ ದಾಖಲೆ ಸಮೇತ ದೂರು ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್‌ಕುಮಾರ್ ಮೋಕಾ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಂಪ್ಲಿ ಕ್ಷೇತ್ರದಲ್ಲಿ 14,563 ನಕಲಿ ಮತದಾರರು, ಬಳ್ಳಾರಿ ನಗರ 14,563, ಬಳ್ಳಾರಿ ಗ್ರಾಮೀಣ 18,769, ಸಿರುಗುಪ್ಪ 25,970 ಹಾಗೂ ಸಂಡೂರು ಕ್ಷೇತ್ರದಲ್ಲಿ 15,400 ನಕಲಿ ಮತದಾರರಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು’ ಎಂದರು.

‘ಕಾಂಗ್ರೆಸ್ ಸರ್ಕಾರ ₹1.5 ಲಕ್ಷ ಕೋಟಿ ಸಾಲ ಮಾಡಿ ಬಜೆಟ್‌ ಮಾಡಿದೆ. ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಕೇವಲ ₹52 ಸಾವಿರ ಕೋಟಿ ಮಾತ್ರ ಮೀಸಲಿಟ್ಟಿದ್ದಾರೆ. ಅಭಿವೃದ್ಧಿ ಗೌಣವಾಗಿದೆ. ಅನುದಾನ, ಅಭಿವೃದ್ಧಿಯಿಲ್ಲದೆ ಕಾಂಗ್ರೆಸ್ ಶಾಸಕರು ಬೀದಿಯಲ್ಲಿ ಓಡಾಡಲು ಸಾಧ್ಯವಿಲ್ಲದಂತಾಗಿದೆ’ ವ್ಯಂಗ್ಯವಾಡಿದರು.

ADVERTISEMENT

ವಿಧಾನ ಪರಿಷತ್ ಸದಸ್ಯರಾದ ವೈ.ಎಂ.ಸತೀಶ್, ಹೇಮಲತಾ, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಭದ್ರವಾಡಿ ಚಂದ್ರು, ಮಹಿಳಾ ಘಟಕದ ಅಧ್ಯಕ್ಷೆ ಸುಗುಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.