ADVERTISEMENT

ಕೂಡ್ಲಿಗಿ: ಅಂಬುಲೆನ್ಸ್‌ ಸೇವೆಗೆ ಚಾಲನೆ

ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 15:44 IST
Last Updated 12 ಜೂನ್ 2024, 15:44 IST
ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿದ್ದ 108 ವಾಹನವನ್ನು ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಲೋಕಾರ್ಪಣೆ ಮಾಡಿದರು
ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿದ್ದ 108 ವಾಹನವನ್ನು ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಲೋಕಾರ್ಪಣೆ ಮಾಡಿದರು   

ಕೂಡ್ಲಿಗಿ: ಕ್ಷೇತ್ರದಲ್ಲಿ ಆರೋಗ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಹೇಳಿದರು.

ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿದ್ದ 108 ತುರ್ತು ಆರೋಗ್ಯ ಸೇವೆಯ ವಾಹನವನ್ನು ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯ ಮೂಲಕ ಸಾರ್ವಜನಿಕ ವಲಯದಲ್ಲಿ ಉಂಟಾಗುವ ಆರೋಗ್ಯ ಸೇವೆಗಳಿಗಾಗಿ ತುರ್ತು ಸೇವೆಗಾಗಿ ನೀಡಿರುವ 108 ಅಂಬುಲೆನ್ಸ್ ಉಚಿತ ಸೇವೆಯನ್ನು ಪಡೆದುಕೊಳ್ಳಬೇಕು. ಆರೋಗ್ಯ ಸೇವೆಗಳು ವೇಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉಚಿತ ಅಂಬುಲೆನ್ಸ್ ಒದಗಿಸಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ನಂತರ 108 ವಾಹನ ಅಧಿಕಾರಿಗಳಿಂದ ವಾಹನದಲ್ಲಿನ ಸೌಲಭ್ಯ ಕುರಿತು ಮಾಹಿತಿ ಪಡೆದುಕೊಂಡರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಪಿ. ಪ್ರದೀಪ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿಯ ವೈದ್ಯಾಧಿಕಾರಿ ಡಾ.ಮಧು, ಹಿರಿಯ ಆರೋಗ್ಯ ನಿರೀಕ್ಷಕ ಜಗದೀಶ್, 108 ಪ್ರದೇಶಿಕ ಮುಖ್ಯಸ್ಥ ಸದಾನಂದ, ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ್, ಜಿಲ್ಲ ಉಸ್ತುವಾರಿ ಸಂತೋಷ್ ಕುಮಾರ್, ಪಟ್ಟಣ ಪಂಚಾಯ್ತಿ ಸದಸ್ಯರಾದ ಕಾವಲ್ಲಿ ಶಿವಪ್ಪ ನಾಯಕ, ಶಿರಿಬಿ ಮಂಜುನಾಥ, ಬಸು ನಾಯ್ಕ್, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಉದಯಜನ್ನು, ಕೋಗಳಿ ಮಂಜುನಾಥ, ಡಾಣಿ ರಾಘವೇಂದ್ರ, ಎಚ್. ವೀರಭದ್ರಪ್ಪ, ಬಸವರಾಜ, ಜಿಲಾನ್ ಪಾಲ್ಗೊಂಡಿದ್ದರು.

12KDL2: ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಸಮೂದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿದ್ದ 108 ವಾಹನವನ್ನು ಲೋಕಾರ್ಪಣೆ ಮಾಡಿದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು 108 ಪ್ರದೇಶಿಕ ಮುಖ್ಯಸ್ಥ ಸದಾನಂದ ಅವರಿಂದ ವಾಹನದಲ್ಲಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.