ADVERTISEMENT

ಬಳ್ಳಾರಿ | ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ

ಪೋಕ್ಸೊ, ಬಾಲ್ಯ ವಿವಾಹ ಕಾಯ್ದೆ ತರಬೇತಿ ಕಾರ್ಯಗಾರದಲ್ಲಿ ನ್ಯಾಯಧೀಶ ರಾಜೇಶ್ ಹೊಸಮನೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 16:19 IST
Last Updated 23 ಜುಲೈ 2024, 16:19 IST
<div class="paragraphs"><p>ಪೋಕ್ಸೊ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು&nbsp; ಪೊಲೀಸ್ ಅಧಿಕಾರಿಗಳು, ಮಕ್ಕಳ ಕಲ್ಯಾಣ ಅಧಿಕಾರಿಗಳು ಹಾಗೂ ತನಿಖಾ ಸಹಾಯಕ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.</p></div>

ಪೋಕ್ಸೊ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು  ಪೊಲೀಸ್ ಅಧಿಕಾರಿಗಳು, ಮಕ್ಕಳ ಕಲ್ಯಾಣ ಅಧಿಕಾರಿಗಳು ಹಾಗೂ ತನಿಖಾ ಸಹಾಯಕ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

   

ಬಳ್ಳಾರಿ: ಪೋಕ್ಸೊ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು  ಪೊಲೀಸ್ ಅಧಿಕಾರಿಗಳು, ಮಕ್ಕಳ ಕಲ್ಯಾಣ ಅಧಿಕಾರಿಗಳು ಹಾಗೂ ತನಿಖಾ ಸಹಾಯಕ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ರೀಡ್ಸ್ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ ಶೋಭಾ ರಾಣಿ ವಿ.ಜೆ., ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿಕುಮಾರ್‌ ಉದ್ಘಾಟಿಸಿದರು. 

ADVERTISEMENT

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸಿಐಡಿಯ ಎಸ್.ಜೆ.ಪಿ.ಯು ಘಟಕದ ಪೊಲೀಸ್ ತರಬೇತುದಾರ ಸಿ.ಜೆ.ರೋಹಿತ್,  ಪೊಲೀಸ್ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಇಲಾಖೆಗಳ ಭಾಗೀದಾರ ಇಲಾಖೆಗಳ ಸಿಬ್ಬಂದಿಗೆ ತರಬೇತಿ ನೀಡಿದರು. 

‘ಇತ್ತೀಚಿಗೆ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು, ಅದನ್ನು ತಡೆಯುವುದರ ಮೂಲಕ ಜಾಗೃತಿಯನ್ನು ಮೂಡಿಸಬೇಕು’ ಎಂದು ಎಸ್‌ಪಿ ಶೋಭಾರಾಣಿ ವಿ.ಜೆ ತಿಳಿಸಿದರು.

‘ಬಾಲ್ಯ ವಿವಾಹ ಹಾಗೂ ಪೋಕ್ಸೊ ಪ್ರಕರಣಗಳ ಕುರಿತು ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕೈಗೊಳ್ಳುವುದರ ಮೂಲಕ ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಬಹುದು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ  ಅಭಿಪ್ರಾಯಪಟ್ಟರು. 

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವಿಕುಮಾರ್.ಕೆ.ಪಿ, ನವೀನ್ ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ, ಡಿಎಸ್‌ಪಿ ಚಂದ್ರಕಾಂತ ನಂದಾರೆಡ್ಡಿ, ಮಕ್ಕಳ ಕಲ್ಯಾಣಾಧಿಕಾರಿ ತಿಪ್ಪೇಶಪ್ಪ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.