ADVERTISEMENT

ಬಳ್ಳಾರಿ: ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 4:44 IST
Last Updated 17 ಜೂನ್ 2024, 4:44 IST
<div class="paragraphs"><p>ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಿದರು.</p></div>

ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಿದರು.

   

ಬಳ್ಳಾರಿ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಿದರು.

ನಗರದ ಎಪಿಎಂಸಿ ಬಳಿಯ ಈದ್ಗಾ ಮೈದಾನಕ್ಕೆ ಬೆಳಗ್ಗಿನಿಂದಲೇ ತಂಡೋಪತಂಡವಾಗಿ ತೆರಳಿದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ವೃದ್ದರಿಂದ ಹಿಡಿದು ಚಿಕ್ಕಮಕ್ಕಳೂ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ದಾನ - ಧರ್ಮದ ಮಹತ್ವ ಕುರಿತು ಭೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.

ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಹಬ್ಬದ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.