ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಕಾಂಗ್ರೆಸ್‌ನ ನಾಲ್ವರು ಶಾಸಕರು ಗೈರು ಹಾಜರಾಗಿದ್ದರು.
ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಜಯಂತಿಯಿಂದ ದೂರ ಉಳಿದಿದ್ದರು. ಸಂಡೂರು ಶಾಸಕ ಈ. ತುಕಾರಾಂ, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಲ್.ಬಿ.ಪಿ. ಭೀಮಾ ನಾಯ್ಕ ಜಯಂತಿಯಲ್ಲಿ ಪಾಲ್ಗೊಂಡಿದ್ದರು.
ಹೋದ ವರ್ಷ ಬಿಜೆಪಿಯಲ್ಲಿದ್ದ ಶಾಸಕ ಆನಂದ್ ಸಿಂಗ್, ಅವರ ಪಕ್ಷದ ಮುಖಂಡರ ಸೂಚನೆಯನ್ನು ಮೀರಿ ಜಯಂತಿಯಲ್ಲಿ ಭಾಗವಹಿಸಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದರು. ಜಯಂತಿಯನ್ನು ಬಿಜೆಪಿ ಬಹಿಷ್ಕರಿಸಿದ್ದರಿಂದ ಆ ಪಕ್ಷದ ಯಾವೊಬ್ಬ ಶಾಸಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ.
ಜಯಂತಿ ಪ್ರಯುಕ್ತ ಮೆರವಣಿಗೆ, ರ್‍ಯಾಲಿ ಮೇಲೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಅದನ್ನು ಲೆಕ್ಕಿಸದೆ ಬಳ್ಳಾರಿ ನಗರದಲ್ಲಿ ಮುಸ್ಲಿಂ ಸಮಾಜದ ಯುವಕರು ಬೈಕ್ ರ್‍ಯಾಲಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.