ಬಳ್ಳಾರಿ: ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಗುರುವಾರ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದರು.
ಬೆಳಗ್ಗೆಯಿಂದಲೇ ನಗರದ ಎಪಿಎಂಸಿ ಬಳಿಯ ಈದ್ಗಾ ಮೈದಾನಕ್ಕೆ ತೆರಳಿದ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೃದ್ದರಿಂದ ಹಿಡಿದು ಚಿಕ್ಕಮಕ್ಕಳು ಕೂಡ ಭಾಗವಹಿಸಿದ್ದರು.
ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ದಾನ - ಧರ್ಮದ ಮಹತ್ವ ಕುರಿತು ಭೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.
ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಅಪ್ಪಿಕೊಂಡು ಸೋದರತ್ವ ಮೆರೆದರು. ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಪ್ರಾರ್ಥನಾ ಸ್ಥಳದಲ್ಲಿ ಸಚಿವ ನಾಗೇಂದ್ರ, ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕರಾಂ, ಬಿಜೆಪಿ ಅಭ್ಯರ್ಥಿ
ಶ್ರೀರಾಮುಲು, ಶಾಸಕ ಭರತ್ ರೆಡ್ಡಿ ಭಾಗವಹಿಸಿ ಹಬ್ಬದ ಶುಭಾಶಯ ಕೋರಿದರು.
ಹಬ್ಬದ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.